ಕರಾವಳಿ ಅಭಿವೃದ್ಧಿಗೆ ಹೊಸ ರೂಪ: ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ

ಮಂಗಳೂರು, ಸೆ.17: ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಭಾಗಗಳು ವಿದ್ಯಾವಂತರು ಮತ್ತು ಬುದ್ಧಿವಂತರು ಇರುವ ಜಿಲ್ಲೆಗಳಾಗಿದ್ದು, ಈ ಭಾಗಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದರು.

ಕರಾವಳಿ ಭಾಗದ ಶಾಸಕರು ಹಾಗೂ ಸಂಸದರು ತಮ್ಮನ್ನು ಭೇಟಿಯಾಗಿ ಸ್ಥಳೀಯ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳನ್ನು ತಮ್ಮ ಗಮನಕ್ಕೆ ತಂದಿದ್ದಾರೆ. ಈ ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗಿದ್ದು, ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಕಸ್ತೂರಿ ರಂಗನ್ ವರದಿ ಕುರಿತು ಚರ್ಚೆ

ಕಸ್ತೂರಿ ರಂಗನ್ ವರದಿ ಹಾಗೂ ಬರ ಪರಿಸ್ಥಿತಿ ಕುರಿತು ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಎರಡು ದಿನಗಳ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಮತ್ತು ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಯಲಿದೆ. ವರದಿಗೆ ಸಂಬಂಧಿಸಿದಂತೆ ಆಯಾ ಶಾಸಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಲಾಗಿದೆ. ಅರಣ್ಯ ಸಚಿವರೂ ತಮ್ಮ ವರದಿಯನ್ನು ಮಂಡಿಸಲಿದ್ದಾರೆ ಎಂದು ಹೇಳಿದರು.

SHARE
Loading spinner

One thought on “ಕರಾವಳಿ ಅಭಿವೃದ್ಧಿಗೆ ಹೊಸ ರೂಪ: ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ

  1. Dear sir. OUR Dynamic CM needs hihest appreciation for conducting cabinet meeting for first time. Though Congress ignored by peoplev for many years but no.much development was brought Inn coastal belt. Hope this meeting will bring more projects to coastal belt. Job creation by IT park etc. Boost to real estate sectors fisheries. tiles etc should see fast growth. JAI HO SIVAKUMAR SIR DK dist needs your blessings 🙌 always

    Loading spinner

Leave a Reply

Your email address will not be published. Required fields are marked *

error: Content is protected !!