ಮಂಜೇಶ್ವರ ಗ್ರಾಮ ಪಂಚಾಯಿತಿಯಲ್ಲಿ ಬೀದಿ ನಾಯಿಗಳ ಹಾವಳಿಗೆ ಮುಕ್ತಿ: ಲಸಿಕೆ ಅಭಿಯಾನಕ್ಕೆ ಚಾಲನೆ

​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಗೆ ಮುಕ್ತಿ ನೀಡಲು ಪಂಚಾಯಿತಿ ಆಡಳಿತ ಮಂಡಳಿ ಸೂಕ್ತ ಕ್ರಮಕ್ಕೆ ಮುಂದಾಗಿದೆ.

​ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪಂಚಾಯಿತಿ ಅಧ್ಯಕ್ಷರ ನೇತೃತ್ವದ ನಿಯೋಗವು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳನ್ನು ನಿರಂತರವಾಗಿ ಭೇಟಿ ಮಾಡಿ ಮನವಿ ಸಲ್ಲಿಸಿತ್ತು.
ಇದರ ಫಲಶ್ರುತಿಯಾಗಿ, ಮಲಪ್ಪುರಂ ಜಿಲ್ಲೆಯಿಂದ ಆಗಮಿಸಿದ ‘ಅನಿಮಲ್ ರೆಸ್ಕ್ಯೂ ಫೋರ್ಸ್’ ತಂಡವು ಪಂಚಾಯಿತಿಯ ಪ್ರತಿಯೊಂದು ವಾರ್ಡ್‌ಗೂ ತೆರಳಿ ಬೀದಿ ನಾಯಿಗಳಿಗೆ ರೇಬೀಸ್ ನಿರೋಧಕ ಚುಚ್ಚುಮದ್ದು ನೀಡುವ ಕಾರ್ಯವನ್ನು ಭರದಿಂದ ನಡೆಸುತ್ತಿದೆ.

​ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷ ಬಶೀರ್ ಕನಿಲ, ಉಪಾಧ್ಯಕ್ಷೆ ಸಹುರಾ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹಾಜಿ ಅಬ್ದುಲ್ ರಹ್ಮಾನ್ ಕೆ.ಎಂ.ಕೆ, ವಾರ್ಡ್ ಸದಸ್ಯರಾದ ಫರ್ಹಾನ ಟೀಚರ್ ಹಾಗೂ ಸಬೀನಾ ಉಪಸ್ಥಿತರಿದ್ದು ಕಾರ್ಯಾಚರಣೆಗೆ ಬೆಂಬಲ ನೀಡಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!