ಸೌಜನ್ಯಾ ಪ್ರಕರಣಕ್ಕೆ ಮರುಜೀವ: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದಲ್ಲಿ ‌ನಡೆದಿದ್ದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು ಮೂರು ತಿಂಗಳ ಗಡುವು ನೀಡಿದೆ. ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರ ತನಿಖಾ ದಳ (ಸಿಬಿಐ), ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಹೀಗಾಗಿ, ಸೌಜನ್ಯಾ ತಾಯಿ ಕುಸುಮಾವತಿ ಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಮರುತನಿಖೆಗೆ ಮನವಿ ಮಾಡಿದ್ದ ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು. ಆ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.


ಕಳಪೆ ಹಾಗೂ ಸ್ವತಂತ್ರವಲ್ಲದ ಪರಾವಲಂಬಿ ತನಿಖೆ ನಡೆಸಲಾಗಿದೆ ಎಂದು ಸಿಬಿಐಗೆ ಜುಲೈನಲ್ಲಿ ತರಾಟೆ ತೆಗೆದುಕೊಂಡಿದ್ದ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು. ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ತನಿಖೆಗೆ ಸೇರಿಸದಂತೆ ಹೊಸದಾಗಿ ಪ್ರಕರಣದ ತನಿಖೆಗೆ ಸುಪ್ರೀಂ ಸೂಚನೆ ನೀಡಿದ್ದು,  ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಆದೇಶದ ಮೂಲಕ ಸೌಜನ್ಯ ಕೊಲೆ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಂತಾಗಿದ್ದು, ಆರೋಪಿಗಳನ್ನ ಪತ್ತೆ ಹಚ್ಚುವ ನಿರೀಕ್ಷೆ ಮತ್ತೆ ಮೂಡಿದೆ. ಶೀಘ್ರದಲ್ಲಿ SIT ರಚನೆಯಾಗೋ ಸಾಧ್ಯತೆ ಇದೆ.
ಉಜಿರೆಯ ಎಸ್‌ಡಿಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದ 17 ವರ್ಷದ ಸೌಜನ್ಯ, ಕಾಲೇಜಿನಿಂದ ಮನೆಗೆ ಹಿಂದಿರುಗುತ್ತಿದ್ದಾಗ ನಾಪತ್ತೆಯಾದಳು. ಅಕ್ಟೋಬರ್ 10, 2012: ಧರ್ಮಸ್ಥಳದ ಮಣ್ಣಸಂಕ ಎಂಬಲ್ಲಿನ ಪೊದೆಯೊಂದರಲ್ಲಿ ಸೌಜನ್ಯಳ ಅರ್ಧನಗ್ನ ಸ್ಥಿತಿಯಲ್ಲಿದ್ದ ಮೃತದೇಹ ಪತ್ತೆಯಾಯಿತು.


ಆಕೆಯನ್ನು ಅತ್ಯಾಚಾರ ಮಾಡಿ, ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ದೂರು ದಾಖಲಾಗಿದೆ. ಅಕ್ಟೋಬರ್ 11, 2012: ಸ್ಥಳೀಯ ಪೊಲೀಸರು ಮಾನಸಿಕ ಅಸ್ವಸ್ಥ ಎನ್ನಲಾದ ಸಂತೋಷ್ ರಾವ್ ಎಂಬಾತನನ್ನು ಪ್ರಮುಖ ಆರೋಪಿಯನ್ನಾಗಿ ಬಂಧಿಸಿದ್ರು. ಆದರೆ, ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲು ಆತನನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಸೌಜನ್ಯ ಕುಟುಂಬ ಮತ್ತು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!