ಮಂಜೇಶ್ವರ: ತಲಪಾಡಿ ನಾರ್ಲ ಪಡೀಲ್ನ ಶ್ರೀಮತಿ ಹರಿಣಾಕ್ಷಿ ಅವರ ಪುತ್ರ ರಂಜನ್ (38) ಎಂಬವರು ಸೋಮವಾರ ರಾತ್ರಿ 8 ಗಂಟೆಯ ಸುಮಾರಿಗೆ ಸ್ವಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಸಂಬಂಧಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ, ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.

ಬಳಿಕ ಮೃತದೇಹವನ್ನು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು.
ಇಂದು ಮರಣೋತ್ತರ ಪರೀಕ್ಷೆಯ ನಂತರ ಮಾಡ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

