ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ವತಿಯಿಂದ ಪಡೀಲ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸಲಾಗುತ್ತಿರುವ ಜಿಲ್ಲಾ ಶಿಶುಪಾಲನಾ ಕೇಂದ್ರದಲ್ಲಿ ಶಿಕ್ಷಕಿ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

20ರಿಂದ 40 ವರ್ಷದೊಳಗಿನ 10ನೇ ತರಗತಿ ಉತ್ತೀರ್ಣಗೊಂಡಿರುವ ಮಹಿಳೆಯರು ಶಿಕ್ಷಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ ಮಾಸಿಕ 10 ಸಾವಿರ ರೂ. ಗೌರವಧನ ನೀಡಲಾಗುವುದು. 7ನೇ ತರಗತಿ ಉತ್ತೀರ್ಣಗೊಂಡಿರುವ ಮಹಿಳೆಯರು ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ 6 ಸಾವಿರ ರೂ. ಗೌರವಧನ ನೀಡಲಾಗುವುದು.
ಶಾಲಾ ಪೂರ್ವ ಶಿಕ್ಷಣ ತರಬೇತಿ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು, ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅವರನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ 6361633162 ದೂರವಾಣಿ ಸಂಖ್ಯೆಗೆ ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

