ಅಕ್ರಮವಾಗಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ – 17 ಜಾನುವಾರುಗಳ ರಕ್ಷಣೆ

ದಿನಾಂಕ: 22-09-2026 ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ರವರು ಠಾಣೆಯ ಸಿಬ್ಬಂದಿ ಸಿದ್ದರಾಮ ರವರೊಂದಿಗೆ ಇಲಾಖಾ ವಾಹನದಲ್ಲಿ ಬೆಳಗಿನ ಜಾವ ಮಾರ್ನಿಂಗ್ ರೌಂಡ್ಸ್ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ, EICHER ಕಂಪೆನಿಯ ಲಾರಿಯಲ್ಲಿ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಮೇರೆಗೆ ಪೊಲೀಸರು ವಾಹನಕ್ಕಾಗಿ ಕಾಯುತ್ತಿದ್ದಾಗ, ಸುಮಾರು ಬೆಳಿಗ್ಗೆ 06:30 ಗಂಟೆಗೆ ಆಡ್ಯಾರು ಕಡೆಯಿಂದ ಮಂಗಳೂರು ನಗರದ ಕಡೆಗೆ ಬರುತ್ತಿದ್ದ ಕಂದು ಬಣ್ಣದ EICHER ಲಾರಿಯೊಂದು ಕಂಡುಬಂದಿದ್ದು, ಸದರಿ ಲಾರಿಯನ್ನು ಬೆನ್ನಟ್ಟಿ ಪಡೀಲ್ ಟೊಯೋಟಾ ಕಾರ್ ಶೋರೂಮ್ ಎದುರು ತಡೆದು ನಿಲ್ಲಿಸಲಾಯಿತು. ಈ ಸಂದರ್ಭದಲ್ಲಿ ಚಾಲಕ ಲಾರಿಯಲ್ಲಿಯೇ ಇದ್ದು, ಲಾರಿಯಲ್ಲಿದ್ದ ಒರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿರುತ್ತಾನೆ.

EICHER ಲಾರಿಯನ್ನು ಪರಿಶೀಲಿಸಿದಾಗ ಲಾರಿಯ ಚಾಲಕನನ್ನು ಸಾಧೀಕ್ ಜಿ ಪ್ರಾಯ 23 ವರ್ಷ ತಂದೆ: ದಿ|| ಗಪೂರ್ ವಾಸ: ಹುಣಸಿನಕೆರೆ ರೋಡ್ ಸ್ಲಮ್ ಬೋರ್ಡ್ ವಿಶ್ವನಾಥ ನಗರ, ಲೇ ಔಟ್, ಹಾಸನ ಜಿಲ್ಲೆ ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಲಾರಿಯ ಬಾಡಿಯನ್ನು ಹಸಿರು ಬಣ್ಣದ ಟಾರ್ಪಲ್ನಿಂದ ಮುಚ್ಚಲಾಗಿದ್ದು, ಪರಿಶೀಲನೆಯ ವೇಳೆ ಲಾರಿಯಲ್ಲಿ ಒಟ್ಟು 17 ಜಾನುವಾರುಗಳು ಪತ್ತೆಯಾಗಿವೆ. ಸದರಿ ಜಾನುವಾರುಗಳನ್ನು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೆ, ಹಿಂಸಾತ್ಮಕ ರೀತಿಯಲ್ಲಿ ಒಂದರ ಮೇಲೊಂದು ಬಿಗಿಯಾಗಿ ಹಗ್ಗಗಳಿಂದ ಲಾರಿಯ ಬಾಡಿಯ ಕಬ್ಬಿಣದ ಕ್ಯಾರೇಜ್ಗಳಿಗೆ ಕಟ್ಟಿ, ಕತ್ತುಗಳನ್ನು ಮೇಲಕ್ಕೆ ಎತ್ತಿ, ಉಸಿರಾಟಕ್ಕೂ ತೊಂದರೆಯಾಗುವ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಕಂಡುಬಂದಿದ್ದು, ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ : U/S 11(A),11(D)) Prevention of Cruelty to Animals Act U/S 6, The Karnataka Prevention of Slaughter and Preservation of Cattle Act U/S 3(5) BNS ರಂತೆ ಪ್ರಕರಣ ದಾಖಲಾಗಿದೆ.

ಈ ಹಿನ್ನೆಲೆಯಲ್ಲಿ 17 ಜಾನುವಾರುಗಳು, ಲಾರಿ ಹಾಗೂ ಆರೋಪಿ ಸಾದಿಕ್ನ ಮೊಬೈಲ್ ಫೋನ್ ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು, ಆರೋಪಿತ ಸಾದಿಕ್ನನ್ನು ದಸ್ತಗಿರಿ ಮಾಡಲಾಗಿದೆ.

ಈ ಪ್ರಕರಣದಲ್ಲಿ ಪರಾರಿಯಾಗಿರುವ ಆರೋಪಿಗಳಾದ ಸುಬಾನ್ ಮತ್ತು ರೆಹಮಾನ್ ರವರ ಪತ್ತೆಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

ಪೊಲೀಸ್ ಆಯುಕ್ತರು
ಮಂಗಳೂರು ನಗರ

SHARE
Loading spinner

Leave a Reply

Your email address will not be published. Required fields are marked *

error: Content is protected !!