ರಾಜೇಂದ್ರ ಕಲ್ಲೂರಾಯರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ


ಕಾಸರಗೋಡು : ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ನಿವೃತ್ತ ಪ್ರಾಂಶುಪಾಲ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಪ್ರತಿಷ್ಠಿತ ಅಂತರಾಜ್ಯ ಪ್ರಶಸ್ತಿಯಾದ ‘ಕನ್ನಡ ಪಯಸ್ವಿನಿ ಪ್ರಶಸ್ತಿ – 2025’ ಆ.2ರಂದು ಬೆಳಗ್ಗೆ 10 ಗಂಟೆಗೆ ಎಡನೀರಿನ ಸ್ವಾಮೀಜಿಸ್ ಪ್ರೌಢ ಶಾಲೆಯಲ್ಲಿ ಪ್ರದಾನ ಮಾಡಲಾಗುವುದು. ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುವ ಶಾಲೆಗಳಲ್ಲಿ ಕನ್ನಡ ಸಾಹಿತ್ಯ ಅಭಿಯಾನದ 4ನೇ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ರಾಜೇಂದ್ರ ಕಲ್ಲೂರಾಯರು ಧಾರ್ಮಿಕ, ಸಾಂಸ್ಕೃತಿಕ, ಶಿಕ್ಷಣ, ಯಕ್ಷಗಾನ ಕೂಟ, ಸಂಘಟನೆ, ನಾಟಕಾಭಿನಯ ಮೊದಲಾದ ಅನೇಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸುರತ್ಕಲ್ಲಿನ ಶೇಣಿ ಗೋಪಾಲಕೃಷ್ಣ ಶತಮಾನೋತ್ಸವ ಸಮಿತಿ, ಕುರಿಯ ವಿಠಲ ಶಾಸ್ತ್ರಿ ಪ್ರತಿಷ್ಠಾನ, ಕರ್ನಾಟಕ ಹಿರಿಯ ನಾಗರಿಕ ಸೇವಾ ಸಮಿತಿ ಮೊದಲಾದ ಸಂಸ್ಥೆಗಳಿಂದ ಗೌರವ ಸ್ವೀಕರಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ ಭವನದ ಸ್ಥಾಪಕಾಧ್ಯಕ್ಷ ಡಾ. ಕೆ ವಾಮನ್ ರಾವ್ ಬೇಕಲ್, ಕನ್ನಡ ಭವನ ಪ್ರಕಾಶನದ ಮುಖ್ಯಸ್ಥೆ ಸಂಧ್ಯಾರಾಣಿ ಟೀಚರ್, ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ, ಸಾಹಿತಿಗಳಾದ ವಿ. ಬಿ ಕುಳಮರ್ವ, ವಿರಾಜ್ ಅಡೂರು, ವಿಜಯರಾಜ ಪುಣಿಂಚಿತ್ತಾಯ, ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಕೋಶಾಧಿಕಾರಿ ಪ್ರೊ. ಅನಂತ ಪದ್ಮನಾಭ ರಾವ್, ಶಾಲೆಯ ಮುಖ್ಯ ಶಿಕ್ಷಕಿ ಜ್ಯೋತಿಲಕ್ಷ್ಮಿ, ಶಾಲಾ ಪಿಟಿಎ ಅಧ್ಯಕ್ಷ ನಾರಾಯಣನ್, ನಿವೃತ್ತ ಮುಖ್ಯ ಶಿಕ್ಷಕಿ ಶಾರದಾ ಮೊಳೆಯಾರ್ ಮೊದಲಾದವರು ಭಾಗವಹಿಸುವರು.

SHARE
Loading spinner

Leave a Reply

Your email address will not be published. Required fields are marked *

error: Content is protected !!