ಉಪಜಿಲ್ಲಾ ಸಮ್ಮೇಳನ‌ ಹಾಗೂ ದಸರಾ ನಾಡಹಬ್ಬ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ : ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ( ರಿ) ಕಾಸರಗೋಡು ಇದರ ಮಂಜೇಶ್ವರ ಉಪಜಿಲ್ಲಾ ಘಟಕದ ಉಪಜಿಲ್ಲಾ ಸಮ್ಮೇಳನ ಮತ್ತು ದಸರಾ ನಾಡಹಬ್ಬದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಮುಳಿಂಜ ಶಾಲೆಯಲ್ಲಿ ಜರಗಿತು .

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರು ಹಾಗೂ ಪ್ರಸ್ತುತ ಟ್ರಸ್ಟಿನ ಸದಸ್ಯರಾದ ಶ್ರೀ ಟಿ ಡಿ ಸದಾಶಿವ ರಾವ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, “ಕನ್ನಡ ಸಂಘಟನೆಯು ಸುದೀರ್ಘವಾದ ಹೋರಾಟದ ಮೂಲಕ ಪಕ್ಷಾತೀತವಾಗಿ ಬೆಳೆದು ಬಂದ ಸಂಘಟನೆಯಾಗಿದೆ.ಕನ್ನಡ ಅಧ್ಯಾಪಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಕಾರಿಯಾಗುವ ಹಲವಾರು ಸರಕಾರದಿಂದ ಸುತ್ತೋಲೆಗಳನ್ನು ಹೊರಡಿಸಲು ಸಾಧ್ಯವಾಗಿದೆ. ಆದ್ದರಿಂದ ಸಮ್ಮೇಳನ ಎಂಬುದು ಸಂಘಟನೆಯ ಕೈಗನ್ನಡಿಯಾಗಿದೆ. ಈ ನಿಟ್ಟಿನಲ್ಲಿ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಎಲ್ಲರೂ ಸಂಘಟನೆಯನ್ನು ಬಲಪಡಿಸಲು ಪ್ರಯತ್ನಿಸಬೇಕೆಂದು ಕರೆ ನೀಡಿದರು.

ಉಪಜಿಲ್ಲಾ ಅಧ್ಯಕ್ಷರಾದ ಅಶೋಕ್ ಕೊಡ್ಲಮೊಗರುರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸುಕೇಶ ಎ , ಕಾರ್ಯದರ್ಶಿ ಜಯಪ್ರಶಾಂತ್ ಪಿ , ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚಿತ್ರಾವತಿ ಚಿಗುರುಪಾದೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು . ಕಾರ್ಯಕ್ರಮದಲ್ಲಿ ಉಪಜಿಲ್ಲಾ ಸಮಿತಿ ಕೋಶಾಧಿಕಾರಿ ಕಿಶೋರ್ ಕುಮಾರ್ ಯಸ್ ಯನ್ , ಜೊತೆ ಕಾರ್ಯದರ್ಶಿ ದಿವಾಕರ ಬಲ್ಲಾಳ್ , ಸದಸ್ಯರಾದ ಚಂದ್ರಿಕಾ ಬಾಕ್ರಬೈಲ್ , ಜಯಂತಿ , ಬಶೀರ್, ನಿಶಿತ್ ಐಲ , ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು .

ಉಪಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಸ್ವಾಗತಿಸಿ, ಗುರುರಾಜ್ ವಂದಿಸಿದರು. ಇಸ್ಮಾಯಿಲ್ ಕಾರ್ಯಕ್ರಮ ನಿರೂಪಿಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!