ಪೊಯಿನಾಚಿಯಲ್ಲಿ ಯೂತ್ ಕಾಂಗ್ರೆಸ್ ಪದಾಧಿಕಾರಿ ನೇಣಿಗೆ ಶರಣು

ಕಾಸರಗೋಡು: ಯೂತ್ ಕಾಂಗ್ರೆಸ್ ಉದುಮ ವಿಧಾನಸಭಾ ಮಂಡಲ ಕಾರ್ಯದರ್ಶಿ ಹರಿಕೃಷ್ಣ (32) ಪೊಯಿನಾಚಿಯಲ್ಲಿರುವ ತಮ್ಮ ಸ್ವಂತ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

​ಶಿಕ್ಷಣ ರಿಕ್ರೂಟಿಂಗ್ ಏಜೆನ್ಸಿ ನಡೆಸುತ್ತಿದ್ದ ಇವರು ಮೊನ್ನೆ ಸಂಜೆಯಿಂದ ನಾಪತ್ತೆಯಾಗಿದ್ದರು. ಬೆಳಿಗ್ಗೆಯಾದರೂ ಮನೆಗೆ ಮರಳದಿದ್ದಾಗ ಕುಟುಂಬಸ್ಥರು ಮೇಲ್ಪರಂಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಳ್ಳುವ ಪ್ರಕ್ರಿಯೆಯಲ್ಲಿದ್ದಾಗಲೇ, ಹರಿಕೃಷ್ಣ ಕಚೇರಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ.

​ವಿಷಯ ತಿಳಿಯುತ್ತಿದ್ದಂತೆ ಮೇಲ್ಪರಂಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!