ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ – ಕೋಚ್ ರವಿಶಾಸ್ತ್ರಿ ಭೇಟಿ

ಉಡುಪಿ: ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ವೀಕ್ಷಕ ವಿವರಣೆಕಾರ ರವಿಶಾಸ್ತ್ರಿ ಅವರು ಗುರುವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು.


ಮಠಕ್ಕೆ ಆಗಮಿಸಿದ ರವಿಶಾಸ್ತ್ರಿ ಅವರನ್ನು ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸ್ವಾಗತಿಸಿ, ಫಲ ಹಾಗೂ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ರವಿಶಾಸ್ತ್ರಿ ಅವರು ಶ್ರೀಕೃಷ್ಣನ ದರ್ಶನ ಪಡೆದು ಮಠದ ಧಾರ್ಮಿಕ ಪರಂಪರೆ ಹಾಗೂ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಉಪಸ್ಥಿತರಿದ್ದರು. ರವಿಶಾಸ್ತ್ರಿ ಅವರ ಶ್ರೀಕೃಷ್ಣ ಮಠ ಭೇಟಿಯ ಸಂದರ್ಭದಲ್ಲಿ ಮಠದ ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!