ಜಾನಪದ ಪರಿಷತ್ತು ರಾಜ್ಯಾಧ್ಯಕ್ಷರಿಂದ ಮಂಗಳೂರಿನ ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಗೆ ಭೇಟಿ……!

ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು, ಬೆಂಗಳೂರು ಇದರ ರಾಜ್ಯಾಧ್ಯಕ್ಷ ಪ್ರೊ. ಹಿ.ಶಿ. ಬೋರಲಿಂಗಯ್ಯ ಅವರು ಕಾರ್ಯನಿಮಿತ್ತ ಕಾಸರಗೋಡು ಹಾಗೂ ಮಂಜೇಶ್ವರಕ್ಕೆ ಭೇಟಿ ನೀಡಿದ ಬಳಿಕ ಗುರುವಾರ ಬೆಳಗ್ಗೆ ಮಂಗಳೂರಿನ ಕರ್ನಾಟಕ ಜಾನಪದ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳೊಂದಿಗೆ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಕುಟುಂಬ ಸಮೇತರಾಗಿ ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ ಹಾಗೂ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ಜಿಲ್ಲಾ ಉಪಾಧ್ಯಕ್ಷರಾದ ಟಿಪೇಶ್ ಎಸ್ ಅಮೀನ್ ಅದ್ಯಪಾಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!