ಅಂತರ್ ಜಿಲ್ಲಾ ವಿದ್ಯಾರ್ಥಿಗಳ ಫುಟ್ಬಾಲ್ ಪಂದ್ಯಾವಳಿ,ಆಗಸ್ಟ್ -04 ರಂದು

ಮಂಗಳೂರು: ದ.ಕ. ಜಿಲ್ಲಾ ಪುಟ್ಟಾಲ್ ಸಂಸ್ಥೆ ಕಳೆದ 26 ವರ್ಷಗಳಿಂದ ನಡೆಸುತ್ತಾ ಬಂದಿರುವ ಅಂತರ್ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದವಿ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಗಳಿಗಾಗಿ ನಡೆಸುತ್ತಾ ಬರುತ್ತಿದ್ದು, 27ನೇ ವರ್ಷದ ಪಂದ್ಯಾವಳಿ ಆಗೋಸ್ಟ್ 4ನೇ ತಾರೀಖು ಸೋಮವಾರ ಪ್ರಾರಂಭವಾಗಲಿದೆ ಎಂದು ಸಮಿತಿಯ ಅಧ್ಯಕ್ಷರಾದ ಡಿ.ಎಂ. ಅಸ್ಲಂ ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .

ಸುದ್ದಿಗಾರೊಂದಿಗೆ ಮಾತನಾಡಿದ ಅವರು , ಮಂಗಳೂರು ನೆಹರೂ ಮೈದಾನಕ್ಕೆ ಹೊಸ ಟರ್ಪ್ ಅಳವಡಿಸಿದ ನಂತರ ಈ ಪಂದ್ಯಾವಳಿಯನ್ನು ಆ ಮೈದಾನದಲ್ಲಿ ನಡೆಸಬೇಕೆಂದು ಬಯಕೆ ನಮ್ಮದಾಗಿತ್ತು. ಆದರೆ ಭಾರೀ ಮಳೆಯ ಕಾರಣ ಈ ಮೈದಾನದ ಕೆಲಸ ವಿಳಂಬವಾದ ಕಾರಣ ಈಗ ಈ ಪಂದ್ಯಾವಳಿ ಎರಡು 4 ತಾಣಗಳಲ್ಲಿ ನಡೆಯಲಿದೆ. ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಡಶಾಲೆಯ ಬಾಲಕರ ಹಾಗೂ ಬಾಲಕಿಯರ ಪಂದ್ಯವಾಳಿಗಳು ನಗರದ ಮಂಗಳಾ ಸ್ಟೇಡಿಯಂ ಪಕ್ಕದಲ್ಲಿರುವ ಕರಾವಳಿ ಉತ್ಸವ ಮೈದಾನದಲ್ಲಿ ನಡೆದರೆ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪಂದ್ಯಾಟ ನಗರದ ಹೊರಭಾಗದ ಮಂಜನಾಡಿ ಗ್ರಾಮದ ಕಿನ್ಯಾ ಎಂಬಲ್ಲಿರುವ ಯೇನೆಪೋಯ ಯುನಿವರ್ಸಿಟಿ ಕ್ಯಾಂಪಸ್ ಮೈದಾನದಲ್ಲಿ ನಡೆಯಲಿದೆ. ಸುಮಾರು 200 ಕ್ಕೂ ಮಿಕ್ಕಿದ ಶಾಲಾ ಕಾಲೇಜು ತಂಡ ನೋಂದಾಯಿಸಿದ್ದು, 12 ದಿನಗಳ ಕಾಲ ಈ ಪಂದ್ಯಾಟ ನಡೆಯಲಿದ್ದು, ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯಂದು ಫೈನಲ್ ಪಂದ್ಯಾಟಗಳು ನಡೆಯಲಿದೆ.

ಈ ಪಂದ್ಯಾವಳಿಯನ್ನು ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ ಕಾಮತರು ಉದ್ಘಾಟಿಸಲಿದ್ದು, ಅತಿಥಿಯಾಗಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಚೆಯರ್‌ಮ್ಯಾನ್ ರಾಜೇಂದ್ರ ಕುಮಾರ್ ಹಾಗೂ ಹಲವಾರು ಗಣ್ಯ ವ್ಯಕ್ತಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಹುಸೈನ್ ಬೋಳಾರ್ ,ರಾಜ್ಯ ಫುಟ್ಬಾಲ್ ಸಂಸ್ಥೆ ಸದಸ್ಯರಾದ ವಿಜಯ ಸುವರ್ಣ , ಮುಂತಾದವರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!