ಮಂಗಳೂರು: ಅಂಜಲ್ ಮೀನು ತಿನ್ನಲು ₹15 ಕೋಟಿ ಖರ್ಚು ಮಾಡಬೇಕಾ ಎಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.


ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ನಿಮಗೆ ಅಂಜಲ್ ಮೀನು ಬೇಕಾದರೆ ಹೇಳಿ, ನಾವು ಕಳುಹಿಸಿಕೊಡುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವ್ಯಂಗ್ಯವಾಡಿದರು.


ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ‘ರಿಯಲ್ ಎಸ್ಟೇಟ್ ಸರ್ಕಾರ’ ಎಂದು ಟೀಕಿಸಿದ ಭರತ್ ಶೆಟ್ಟಿ, ಸರ್ಕಾರದ ವಿರುದ್ಧ ಎಷ್ಟೇ ಟೀಕೆ ಮಾಡಿದರೂ ಯಾವುದೇ ಪರಿಣಾಮವಾಗುತ್ತಿಲ್ಲ ಎಂದು ಆರೋಪಿಸಿದರು.

