ಉಡುಪಿ: ಶಾರ್ಜಾದಲ್ಲಿ ಅಮಾನವೀಯವಾಗಿ ಹತ್ಯೆಗೀಡಾದ ಕುಂದಾಪುರ ತಾಲೂಕಿನ ಹೊನ್ನನಕೇರಿ ನಿವಾಸಿ ಆಲ್ವಿನ್ ಪ್ರಕಾಶ್ ಕುಂದರ್ ಅವರ ಪಾರ್ಥಿವ ಶರೀರ ಶುಕ್ರವಾರ ತವರಿಗೆ ತಲುಪಿತು.

ಪಾರ್ಥಿವ ಶರೀರವನ್ನು ಹೊನ್ನನಕೇರಿಯಲ್ಲಿರುವ ಅವರ ನಿವಾಸಕ್ಕೆ ತರಲಾಗಿದ್ದು, ಕುಟುಂಬಸ್ಥರು, ಬಂಧುಗಳು ಹಾಗೂ ಆಪ್ತರು ಅಂತಿಮ ದರ್ಶನ ಪಡೆದರು. ಮನೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬಸ್ಥರು ಹಾಗೂ ಬಂಧುಗಳು ಕಂಬನಿ ಮಿಡಿದರು.

ಬಳಿಕ ಪ್ರೊಟೆಸ್ಟಂಟ್ ಸಿ.ಎಸ್.ಐ. ಕೃಪಾ ಚರ್ಚ್‌ನಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಅಂತಿಮ ವಿಧಿವಿಧಾನದಲ್ಲಿ ಭಾಗವಹಿಸಲಿದ್ದಾರೆ.


