ಕುಂಜತ್ತೂರು: ಶ್ರೀ ಮಹಾಲಿಂಗೇಶ್ವರ ವಿದ್ಯಾನಿಕೇತನದಲ್ಲಿ ‘ವಂದೇ ಮಾತರಂ’ ಸಾಮೂಹಿಕ ಗಾಯನ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು. ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥಾನದ ನೇತೃತ್ವದಲ್ಲಿ ಸೆಪ್ಟೆಂಬರ್ 25ರಂದು ಬೆಳಗ್ಗೆ 11 ಗಂಟೆಗೆ ಶಾಲಾ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಗಣ್ಯರು ಸಾಮೂಹಿಕವಾಗಿ ‘ವಂದೇ ಮಾತರಂ’ ಗಾಯನದಲ್ಲಿ ಪಾಲ್ಗೊಂಡರು. ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಕುಸುಮ ಪ್ರಶಾಂತಿ ಅತಿಥಿಗಳನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗದ ಗ್ರಾಮ ವಿಕಾಸ ಸಂಯೋಜಕ ಜಿತಿನ್ ಪ್ರತಾಪ್ ನಗರ ಭಾಗವಹಿಸಿ ಮಾತನಾಡಿದರು. ಮಂಜೇಶ್ವರದ ವಕೀಲ ಹಾಗೂ ನೋಟರಿ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭಾರತೀಯ ಸೇನೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಎ.ಸಿ.ಪಿ. ಅವಿಲ್ದಾರ್ ಜೀವನ್ ಸುವರ್ಣ ಹಾಗೂ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಕರುಣಾಕರ್ ಅವರು ತಮ್ಮ ಸೇನಾ ಸೇವೆಯ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ದೇಶಸೇವೆ, ಶಿಸ್ತು ಹಾಗೂ ಸೇನಾ ವೃತ್ತಿಯ ಅನುಭವಗಳ ಕುರಿತು ಅವರು ಮಾತನಾಡಿದರು.

ಮಂಜೇಶ್ವರ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಆಶಾಲತಾ, ಶಾಲಾ ಅಧ್ಯಕ್ಷ ಸುರೇಶ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರಿಗೆ ಶಾಲೆಯ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ದೇಶಸೇವೆಯ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ನಡೆಸಲಾಗಿತ್ತು


