ಮಾರ್ಗದೀಪ ಸಾಂಸ್ಕೃತಿಕ ಸಮಿತಿಯ ಗಣೇಶೋತ್ಸವದಲ್ಲಿ ಪಮ್ಮಿ ಕೊಡಿಯಾಲ್ ಬೈಲ್ ಭಾಗಿ……!

ಅಜ್ಮಾನ್: ಯುಎಇಯ ಮಾರ್ಗದೀಪ ಸಾಂಸ್ಕೃತಿಕ ಸಮಿತಿ ವತಿಯಿಂದ ಆಯೋಜಿಸಿದ್ದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ದಕ್ಷಿಣ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್ ಗಣ್ಯ ಅತಿಥಿಯಾಗಿ ಭಾಗವಹಿಸಿ, ಭಕ್ತರೊಂದಿಗೆ ಗಣೇಶೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು.

ಅಜ್ಮಾನ್‌ನ ಜುರ್ಫ್‌ನಲ್ಲಿರುವ ಇಂಡಿಯನ್ ಅಸೋಸಿಯೇಷನ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಹೋಮ, ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ಸಾಂತೂರು ಲಕ್ಷ್ಮೀಕಾಂತ್ ಭಟ್ ಹಾಗೂ ರಾಜೇಶ್ ಪ್ರಸಾದ್ ಅಡಿಗ ಅವರ ಪೌರೋಹಿತ್ಯದಲ್ಲಿ ನೆರವೇರಿದವು.

ಕರ್ನಾಟಕದ ಮಾಜಿ ಸಚಿವ ಹಾಗೂ ಉದ್ಯಮಿ ಕೃಷ್ಣ ಜೆ. ಪಾಲೇಮಾರ್, ಕರ್ನಾಟಕ ಸಂಘ ಅಬುಧಾಬಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಸಮಾಜಸೇವಕ ರವಿ ಕಟಪಾಡಿ, ಮಾರ್ಗದೀಪ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಮಹೇಶ್ ಚಂದ್ರಗಿರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪಮ್ಮಿ ಕೊಡಿಯಾಲ್ ಬೈಲ್ ಸೇರಿದಂತೆ ಗಣ್ಯರು ಶ್ರೀ ಗಣೇಶನ ದರ್ಶನ ಪಡೆದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ವಿವಿಧ ಭಜನಾ ತಂಡಗಳಿಂದ ಭಜನೆ, ನೃತ್ಯ ಸೇರಿದಂತೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

ಈ ಸಂದರ್ಭದಲ್ಲಿ ಸರ್ವೋತ್ತಮ ಶೆಟ್ಟಿ ಹಾಗೂ ಸಮಾಜಸೇವಕ ರವಿ ಕಟಪಾಡಿ ಅವರನ್ನು ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಎರಡು ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಸಂಜೆ ವಿಶೇಷ ಪೂಜೆಯ ಬಳಿಕ ಭಜನೆ, ವಾದ್ಯಘೋಷ ಹಾಗೂ ಶೋಭಾಯಾತ್ರೆಯೊಂದಿಗೆ ಶ್ರೀ ಗಣೇಶನ ವಿಸರ್ಜನೆ ನೆರವೇರಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!