ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಜಾನಪದ ಪರಿಷತ್ತು (ಕಜಾಪ) ಕೇರಳ ಗಡಿನಾಡ ಘಟಕದ ಜಂಟಿ ಆಶ್ರಯದಲ್ಲಿ ಸೆ.27ರಂದು ಕೊಚ್ಚಿಯ ಕಲೂರ್ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್‌ನಲ್ಲಿ ಕೇರಳ-ಕರ್ನಾಟಕ ಜಾನಪದ ಉತ್ಸವ, ಕಜಾಪ ಪದಾಧಿಕಾರಿಗಳ ಪದಗ್ರಹಣ, ಕೃತಿ ಬಿಡುಗಡೆ, ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಮಾಜಿ ಸಚಿವ ಹಾಗೂ ಕರ್ನಾಟಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ.ರೇವಣ್ಣ ಜಾನಪದ ಮಹೋತ್ಸವ ಉದ್ಘಾಟಿಸಲಿದ್ದು, ಮಾಜಿ ಶಾಸಕ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತೀಹಳ್ಳಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.


ಕಾರ್ಯಕ್ರಮದಲ್ಲಿ ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಕೇರಳ ಮೀನುಗಾರಿಕೆ ಮತ್ತು ಬಂದರು ಇಲಾಖೆ ಸಚಿವ ವಿ.ಇ.ಅಬ್ದುಲ್ ಗಫೂರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

