ಕಾಸರಗೋಡು: ಹೆಣ್ಣುಮಕ್ಕಳ ಫೋಟೋಗಳನ್ನು ಅವರ ಅನುಮತಿಯಿಲ್ಲದೆ ಸಂಗ್ರಹಿಸಿ, ತಂತ್ರಜ್ಞಾನ ಬಳಸಿ ಅಶ್ಲೀಲ ಚಿತ್ರಗಳನ್ನಾಗಿ ಮಾರ್ಫ್ ಮಾಡಿ ಟೆಲಿಗ್ರಾಂ ಗ್ರೂಪ್ಗಳಲ್ಲಿ ಹಂಚಿಕೊಳ್ಳುತ್ತಿದ್ದ ಪ್ರಕರಣದ ಮುಖ್ಯ ಆರೋಪಿಯನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

ಮಲಪ್ಪುರಂ ಪೂಕ್ಕಾಟ್ಟಿರಿ ಮೂಲದ ನಿಕೇತ್ (24) ಬಂಧಿತ ಆರೋಪಿ. ಈ ಪ್ರಕರಣದ ಮೊದಲ ಆರೋಪಿ, ಇರಿಯಣ್ಣಿ ಮೂಲದ ಅನೂಪ್ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದರು.

ಅನೂಪ್ ನೀಡಿದ ಫೋಟೋಗಳನ್ನು ನಿಕೇತ್ ಎಡಿಟ್ ಮಾಡಿ ಅಶ್ಲೀಲ ಚಿತ್ರಗಳನ್ನಾಗಿ ಬದಲಾಯಿಸುತ್ತಿದ್ದನೆಂದು ತನಿಖೆಯಲ್ಲಿ ತಿಳಿದುಬಂದಿದೆ.
ಸೆಪ್ಟೆಂಬರ್ 25 ರಂದು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಅಕ್ಟೋಬರ್ 9 ರವರೆಗೆ ರಿಮಾಂಡ್ಗೆ ಒಳಪಡಿಸಲಾಗಿದೆ.

ಘಟನೆಗೆ ಸಂಬಂಧಿಸಿದ ಡಿಜಿಟಲ್ ಉಪಕರಣಗಳು ಹಾಗೂ ಟೆಲಿಗ್ರಾಂ ಗ್ರೂಪ್ಗಳ ಸಾಕ್ಷ್ಯಾಧಾರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

