ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಸಮೀಪದ ಹಳೀರ ಫ್ಲೈಓವರ್ ಬಳಿ ಆಲ್ಟೋ ಕಾರು ಮತ್ತು ಟೆಂಪೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಮೂವರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಮೃತರನ್ನು ನಫೀಸಾ(55) ಎಂದು ಗುರುತಿಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

