ನಿಯಂತ್ರಣ ತಪ್ಪಿದ ಸ್ಕೂಟರ್ ರಾಷ್ಟ್ರೀಯ ಹೆದ್ದಾರಿಯ ಸಂರಕ್ಷಣಾ ಗೋಡೆಗೆ ಢಿಕ್ಕಿ,ಸವಾರನಿಗೆ ತೀವ್ರವಾಗಿ ಗಾಯ

ಕುಂಬಳೆ: ಶಿರಿಯಾದಲ್ಲಿ ನಿಯಂತ್ರಣ ತಪ್ಪಿದ ಸ್ಕೂಟರ್ ರಾಷ್ಟ್ರೀಯ ಹೆದ್ದಾರಿಯ ಸಂರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದು ಮಗುಚಿಬಿದ್ದ ಪರಿಣಾಮ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ.

​ಮಂಗಳೂರಿನ ಪೆರ್ಮುದೆ ಕಟೀಲು ನಿವಾಸಿ ಜೋಸೆಫ್ ಡಿಸೋಜ (52) ಗಂಭೀರ ಗಾಯಗೊಂಡವರಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೇಳದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿ ಸ್ವಊರಿಗೆ ಮರಳುತ್ತಿದ್ದಾಗ ಬಾನುವಾರ ರಾತ್ರಿ ಈ ದುರಂತ ಸಂಭವಿಸಿದೆ. ಶಿರಿಯಾ ತಲುಪುತ್ತಿದ್ದಂತೆ ವಾಹನದ ಮೇಲಿನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!