ಮಂಗಳೂರು ನಗರದ ಕರಂಗಲಪಾಡಿಯ ಕೋರ್ಟ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, `ಡ್ಸ್ ಆಟೋ ಮತ್ತು ದ್ವಿಚಕ್ರ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರುಗಾಯಗೊಂಡ ಘಟನೆ ನಡೆದಿದೆ.


ಕೋರ್ಟ್ ರಸ್ತೆಯ ಇಳಿಜಾರಿನಲ್ಲಿ ಚಲಿಸುತ್ತಿದ್ದ ಗೂಡ್ಸ್ ಆಟೋ ಹಾಗೂ ಕರಂಗಲಪಾಡಿ ಕಡೆಯಿಂದ ಕೋರ್ಟ್ ರಸ್ತೆಗೆ ಪ್ರವೇಶಿಸುತ್ತಿದ್ದ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದ ರಭಸಕ್ಕೆ ಸ್ಥಳದಲ್ಲೇ ಚಲಿಸುತ್ತಿದ್ದ ದ್ವಿಚಕ್ರ ವಾಹನವೂ ಸಿಲುಕಿಕೊಂಡಿದೆ.

ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ಹಾಗೂ ಗೂಡ್ಸ್ ಆಟೋ ಚಾಲಕ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು, ಆಟೋ ಮತ್ತು ಬೈಕ್ ಮೂರೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿವೆ. ವಿಷಯ ತಿಳಿಯುತ್ತಿದ್ದಂತೆ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

