ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸಮಿತಿ ರಚನೆ ಸ್ವಾಗತ: ಐವನ್ ಡಿ’ಸೋಜಾ

ಮಂಗಳೂರಿನಲ್ಲಿ ಕರಾವಳಿ ಹೈಕೋರ್ಟ್ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ವಿಬು ಬಕ್ರು ಸಮಿತಿ ರಚಿಸಿರುವುದನ್ನು ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದಾರೆ.

ಕರಾವಳಿ ಭಾಗದ ಜನರು ಹಾಗೂ ಕಕ್ಷಿದಾರರು ತಮ್ಮ ಪ್ರಕರಣಗಳ ವಿಚಾರಣೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಾಗಿರುವುದರಿಂದ ಹಲವು ವರ್ಷಗಳಿಂದ ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸುವ ಉದ್ದೇಶದಿಂದ ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೋರಾಟ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಸಮಿತಿಯ ವತಿಯಿಂದ ಹಲವು ಹಂತಗಳಲ್ಲಿ ಪ್ರತಿಭಟನೆಗಳು, ಮನವಿಗಳು ಹಾಗೂ ಜನಪರ ಸಭೆಗಳನ್ನು ನಡೆಸಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಗಮನಕ್ಕೆ ಈ ವಿಚಾರವನ್ನು ತರಲಾಗಿದೆ.

ಈ ಹಿಂದೆ ಮಾಜಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಗತ್ಯ ಮೂಲಸೌಕರ್ಯ ಹಾಗೂ ಇತರ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರದ ಮೂಲಕ ಸರ್ಕಾರದ ಸಹಮತವನ್ನು ವ್ಯಕ್ತಪಡಿಸಿದ್ದರು. ಪ್ರಸ್ತುತ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರೂ ಕೂಡ ಈ ವಿಚಾರದಲ್ಲಿ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಇದೀಗ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಮಿತಿ ರಚಿಸಿರುವುದು ಮಹತ್ವದ ಹೆಜ್ಜೆಯಾಗಿದೆ. ಕರಾವಳಿ ಹೈಕೋರ್ಟ್ ಪೀಠದ ವ್ಯಾಪ್ತಿಗೆ ಯಾವ ಯಾವ ಜಿಲ್ಲೆಗಳನ್ನು ಒಳಪಡಿಸಬೇಕು ಹಾಗೂ ಸಾರ್ವಜನಿಕರು, ಕಕ್ಷಿದಾರರು, ವಕೀಲರು ಮತ್ತು ವಿವಿಧ ಸಂಘ-ಸಂಸ್ಥೆಗಳ ಅಭಿಪ್ರಾಯಗಳನ್ನು ಪಡೆದು ಸೂಕ್ತ ಶಿಫಾರಸುಗಳನ್ನು ನೀಡಲು ಈ ಸಮಿತಿ ಕಾರ್ಯನಿರ್ವಹಿಸಲಿದೆ.

ಈಗ ಪ್ರಸ್ತುತ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಸಭೆ ಸಮಿತಿಯನ್ನು ರಚನೆ ಮಾಡುವ ಮೂಲಕ ಯಾವ ಯಾವ ಜಿಲ್ಲೆಗಳನ್ನು ಈ ಕರಾವಳಿ ಹೈಕೋರ್ಟ್ ಪೀಠಕ್ಕೆ ಸೇರಿಸಬೇಕೆಂಬುದರ ಬಗ್ಗೆ ಮತ್ತು ಸಾರ್ವಜನಿಕರ ಅಭಿಪ್ರಾಯವನ್ನು ಪಡೆಯಲು ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿ’ಸೋಜಾ ಅವರು ಹೃದಯಪೂರ್ವಕವಾಗಿ ಸ್ವಾಗತಿಸಿದ್ದಾರೆ.

ಕರಾವಳಿ ಭಾಗದ ಜನರ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಸಿದ್ಧವಿದೆ ಎಂದು ಸಮಿತಿಯನ್ನು ರಚನೆ ಮಾಡಲಾಗಿದ್ದು ಇದನ್ನು ಹೃದಯಪೂರ್ವಕವಾಗಿ ಸ್ವೀಕರಿ ಸ್ವಾಗತಿಸಲಾಗಿದೆ ಎಂದು ಹೋರಾಟ ಸಮಿತಿಯ ಅಧ್ಯಕ್ಷರಾದ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ಸ್ವಾಗತಿಸಿದ್ದಾರೆ ಮಂಗಳೂರು ಬಾರ್ ಅಸೋಸಿಯೇಷನ್‌ನ ಹಿರಿಯ ವಕೀಲರಾದ ಎಂ.ಪಿ. ನೊರೊನ್ಹಾ, ಎಚ್.ವಿ. ರಾಘವೇಂದ್ರ ರಾವ್, ಮಂಗಳೂರು ಬಾರ್ ಎಸೋಸಿಯೇಷನ್ ಅಧ್ಯಕ್ಷರಾದ ಜಗದೀಶ್ ಸೇಣವ ಉಡುಪಿ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷರಾದ ರೊನಾಲ್ಡ್ ಪ್ರವೀಣ್ ಹಾಗೂ ಹಿರಿಯ ಸೇರಿದಂತೆ ಹೋರಾಟ ಸಮಿತಿಯ ಪ್ರಮುಖರು ಸ್ವಾಗತಿಸಿದ್ದಾರೆ.

ಮುಂದಿನ ದಿನಗಳಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಸಾರ್ವಜನಿಕರು, ಕಕ್ಷಿದಾರರು, ವಕೀಲರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಅಭಿಪ್ರಾಯಗಳನ್ನು ಪಡೆದು, ಎಲ್ಲರ ಸಹಕಾರದೊಂದಿಗೆ ಮಂಗಳೂರಿನಲ್ಲಿ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಯಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಪ್ರಕ್ರಿಯೆಗೆ ಸರ್ಕಾರದಿಂದಲೂ ಅಗತ್ಯ ಸಹಕಾರ ದೊರೆಯುವ ವಿಶ್ವಾಸವಿದೆ ಎಂದು ಶ್ರೀ ಐವನ್ ಡಿ’ಸೋಜಾ ತಿಳಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!