ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರ ಮುಂದಾಳತ್ವದಲ್ಲಿ ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಬ್ಯಾಡ್ಮಿಂಟನ್ ಕ್ರೀಡಾಕೂಟ

ಮಂಗಳೂರು: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಸೆಪ್ಟೆಂಬರ್ 27 ರಂದು ಆಯೋಜಿಸಲಾದ ಯೋನೆಕ್ಸ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಸಬ್ ಜೂನಿಯರ್ ಹಾಗೂ ಜೂನಿಯರ್ ಬ್ಯಾಡ್ಮಿಂಟನ್ ಕ್ರೀಡಾಕೂಟವು ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರ ಮುಂದಾಳತ್ವದಲ್ಲಿ ಯಶಸ್ವಿಯಾಗಿ ನಡೆಯಿತು.


ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಸಬ್ ಜೂನಿಯರ್ ಹಾಗೂ ಜೂನಿಯರ್ ವಿಭಾಗದ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕ್ರೀಡಾಕೂಟವು ಯುವ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿದ್ದು, ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲು ಪ್ರೇರಣೆಯಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!