​ಎಂಆರ್‌‌ಪಿಎಲ್ ಸ್ಫೋಟ ಸ್ಥಳಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಭೇಟಿ

​ಮಂಗಳೂರು: ಕಳವಾರಿನಲ್ಲಿರುವ ಎಂಆರ್‌ಪಿಎಲ್ (MRPL) ಸಂಸ್ಥೆಯ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

​ದುರಂತ ಸಂಭವಿಸಿದ ತಕ್ಷಣವೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ಮತ್ತು ತುರ್ತು ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿವೆ. ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸಲಾಗಿದೆ. ಯಾವುದೇ ರೀತಿಯ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಸಮೀಪದ ಆಸ್ಪತ್ರೆಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಪಡೆಗಳು ಸಂಪೂರ್ಣ ಸನ್ನದ್ಧವಾಗಿರಲು ಅಧಿಕಾರಿಗಳಿಗೆ ಸೂಚಿಸಿದರು.

​ಸ್ಫೋಟದ ತೀವ್ರತೆಯಿಂದಾಗಿ ಗಾಯಗೊಂಡವರಿಗೆ ತಕ್ಷಣವೇ ಉಚಿತ ಹಾಗೂ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಮತ್ತು ಆಸುಪಾಸಿನ ಮನೆ ಹಾಗೂ ಆಸ್ತಿ-ಪಾಸ್ತಿಗೆ ಹಾನಿಯಾಗಿರುವ ಪ್ರದೇಶಗಳ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ತಕ್ಷಣವೇ ಅಗತ್ಯ ನೆರವು ಮತ್ತು ಸೂಕ್ತ ಪರಿಹಾರ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ, ಕಾಂಗ್ರೆಸ್‌ ಹಿರಿಯ ಮುಖಂಡರಾದ ಸುಭಾಶ್ಚಂದ್ರ ಕೊಳ್ನಾಡ್, ತಾಪಂ ಮಾಜಿ ಸದಸ್ಯ ಬಶೀರ್, ಕಾಂಗ್ರೆಸ್ ವಲಯಾಧ್ಯಕ್ಷರು, ಕಾಂಗ್ರೆಸ್‌ನ ಪ್ರಮುಖ ನಾಯಕರು, ಕಾರ್ಯಕರ್ತರು ಜತೆಗಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!