ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ

ದೆಹಲಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರು ದೆಹಲಿಯಲ್ಲಿ ಭೇಟಿ ಮಾಡಿ, ಜಿಲ್ಲೆಯಲ್ಲಿನ ಪಕ್ಷದ ಸಂಘಟನೆ ಹಾಗೂ ಬಲವರ್ಧನೆ ಕುರಿತು ಮಹತ್ವದ ಚರ್ಚೆ ನಡೆಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ತಳಮಟ್ಟದಲ್ಲಿ ಸದೃಢಗೊಳಿಸುವುದು, ಸಂಘಟನೆಯನ್ನು ಚುರುಕುಗೊಳಿಸುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರನ್ನು ಪಕ್ಷದೊಂದಿಗೆ ಬೆಸೆಯುವ ಕುರಿತು ಚರ್ಚೆ ನಡೆಯಿತು.

ಅಲ್ಲದೆ, ಪಕ್ಷದ ಸಿದ್ಧಾಂತ, ಕಾರ್ಯಕ್ರಮಗಳು ಹಾಗೂ ಜನಪರ ವಿಚಾರಗಳನ್ನು ಪರಿಣಾಮಕಾರಿಯಾಗಿ ಜನರ ಬಳಿಗೆ ತಲುಪಿಸುವ ನಿಟ್ಟಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷರಿಂದ ಮಾರ್ಗದರ್ಶನ ಪಡೆಯಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!