ಮಂಗಳೂರು MRPL ಘಟಕದಲ್ಲಿ ಸಂಭವಿಸಿರುವ ಭೀಕರ ಸ್ಫೋಟವು ಸುತ್ತಮುತ್ತಲಿನ ಜನರಲ್ಲಿ ಆತಂಕ ಮೂಡಿಸಿದೆ. ಸ್ಫೋಟದ ತೀವ್ರತೆಗೆ ಬಜ್ಪೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಜನರು ಆತಂಕಕ್ಕೊಳಗಾಗಿದ್ದಾರೆ.

ಈ ಘಟನೆಯ ಕುರಿತು ಸಂಪೂರ್ಣ ಸತ್ಯವನ್ನು ಜನರ ಮುಂದೆ ಬಹಿರಂಗಪಡಿಸಬೇಕು. ಕೈಗಾರಿಕಾ ಘಟಕಗಳ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪರಿಶೀಲಿಸಿ, ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

ಬಜ್ಪೆ ನಾಗರಿಕ ರಕ್ಷಣಾ ವೇದಿಕೆಯ ಅಧ್ಯಕ್ಷ ಸಿರಾಜ್ ಬಜ್ಪೇ ಅವರು ಘಟನೆಯನ್ನು ಖಂಡಿಸಿ, ಜನರ ಸುರಕ್ಷತೆಯನ್ನು ಖಾತ್ರಿಪಡಿಸುವಂತೆ ಆಗ್ರಹಿಸಿ ಶೀಘ್ರದಲ್ಲೇ ಪ್ರತಿಭಟನೆ ನಡೆಸಲು ಕರೆ ನೀಡಿದ್ದಾರೆ.

