ಈಸೂರು ಗ್ರಾಮಕ್ಕೆ ಭೇಟಿ ನೀಡಿ, ಸ್ವಾತಂತ್ರ್ಯ ಹೋರಾಟದ ಹುತಾತ್ಮರಿಗೆ ನಮನ ಸಲ್ಲಿಸಿದ ಶಾಸಕ ಮಂಜುನಾಥ ಭಂಡಾರಿ

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕರಾದ ಬಿ.ಕೆ. ಹರಿಪ್ರಸಾದ್ ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಮಂಜುನಾಥ ಭಂಡಾರಿ ಅವರು ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮಕ್ಕೆ ಭೇಟಿ ನೀಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದ ವೀರರಿಗೆ ಗೌರವಪೂರ್ವಕ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಎ.ಐ.ಸಿ.ಸಿ ಕಾರ್ಯದರ್ಶಿ ಗೋಪಿನಾಥ, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಸದಸ್ಯರು, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ನಿಗಾ ಮಂಡಳಿಯ ಅಧ್ಯಕ್ಷರುಗಳು ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!