ಮಣಿಪಾಲ ಆಸ್ಪತ್ರೆಯ 4ನೇ ಮಹಡಿಯಿಂದ ಹಾರಿದ ಒಳರೋಗಿಗೆ ಗಂಭೀರ ಗಾಯ

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಘಟನೆ; ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಉಡುಪಿ: ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದ ಒಳರೋಗಿಯೊಬ್ಬರು ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.


ಗಾಯಗೊಂಡವರನ್ನು ತೀರ್ಥಹಳ್ಳಿಯ ರಾಜೇಶ್ ಆರ್. ಶೆಟ್ಟಿ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಬುಧವಾರ ಆಸ್ಪತ್ರೆಯ ನಾಲ್ಕನೇ ಮಹಡಿಯ ಕಿಟಕಿಯ ಮೂಲಕ ಹೊರಗೆ ಬರಲು ಯತ್ನಿಸಿದ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ದೃಶ್ಯಾವಳಿಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!