ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆಭೀಕರ ಅಪಘಾತ-ಮಗು ಸಹಿತ ಮೂವರಿಗೆ ಗಂಭೀರ ಗಾಯ

ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕೆರೆಕಾಡು ಜಂಕ್ಷನ್ ಬಳಿ ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸಹಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಕಿನ್ನಿಗೋಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಗಾಯಗೊಂಡವರನ್ನು ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ 25ವರ್ಷದ ನಿತಿಲ್, 23ವರ್ಷದ ಅವಿನಾಶ್ ಹಾಗೂ 2ವರ್ಷದ ಮೃತ್ತಿನ್ ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮುಲ್ಕಿ ಮೂಲದ ಮೂವರು ಯುವಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಟೀಲು ಕಡೆಯಿಂದ ದೇವರ ದರ್ಶನ ಮುಗಿಸಿಕೊಂಡು ಕುಂದಾಪುರದ ಕಡೆಗೆ ಹೊರಟಿದ್ದ ಕಾರು, ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಕೆರೆಕಾಡು ತಲುಪುತ್ತಿದ್ದಂತೆ ಮುಲ್ಕಿ ಕಡೆಯಿಂದ ಅತಿ ವೇಗದಿಂದ ಬಂದ ಕಾರು ಹೆದ್ದಾರಿಯ ಹೊಂಡ ತಪ್ಪಿಸುವ ಬರದಲ್ಲಿ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!