ಬೆಂಗಳೂರು ವಸಂತನಗರ:ದಕ್ಷಿಣ ಕನ್ನಡ ಜಿಲ್ಲೆಯ ಆದಿದ್ರಾವಿಡ ಸಮುದಾಯದ ವಿವಿಧ ಸಮಸ್ಯೆಗಳು ಹಾಗೂ ನ್ಯಾಯಯುತ ಬೇಡಿಕೆಗಳನ್ನು ಆದ್ಯತೆಯ ಮೇರೆಗೆ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಕೆ.ಹೆಚ್ . ಮುನಿಯಪ್ಪ ಭರವಸೆ ನೀಡಿದರು.

ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆದಿದ್ರಾವಿಡ ಸಮಾಜದ ಮುಖಂಡರೊಂದಿಗೆ ನಡೆದ ಸಂವಾದದಲ್ಲಿ ಸಮುದಾಯದ ಕುಲದೈವಗಳ ಕ್ಷೇತ್ರಗಳ ಅಭಿವೃದ್ಧಿ, ಜಾತಿ ಪ್ರಮಾಣಪತ್ರ ಪಡೆಯುವಲ್ಲಿನ ತಾಂತ್ರಿಕ ಸಮಸ್ಯೆಗಳ ಪರಿಹಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚಿಸಲಾಯಿತು.


ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಆದಿದ್ರಾವಿಡ ಸಮಾಜದ ಅಧ್ಯಕ್ಷ ಗಣೇಶ್ ಪ್ರಸಾದ್ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.



