ಸೀತಾಂಗೋಳಿ-ಪೆರ್ಲ ರಸ್ತೆಯಲ್ಲಿ ಭೀಕರ ವಾಹನ ಅಪಘಾತ — ಯುವಕ ಸಾವು, ಪತ್ನಿ ಗಂಭೀರ

​ಕಾಸರಗೋಡು: ಸೀತಾಂಗೋಳಿ-ಪೆರ್ಲ ರಸ್ತೆಯ ಪುತ್ತಿಗೆ, ಮುಗು ರೋಡ್ ಬಳಿ ಸಂಭವಿಸಿದ ಭೀಕರ ವಾಹನ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪದ್ದಾನೆ. ಉಜ್ಜಂಪದವು ನಿವಾಸಿ ಮುಹಮ್ಮದ್ ಅವರ ಪುತ್ರ ಎಂ.ಟಿ. ಮುಹಮ್ಮದ್ ಅಶ್ರಫ್ (48) ಸಾವನ್ನಪ್ಪಿದ ದುರ್ದೈವಿ.

​ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಚಲಾಯಿಸುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬಂದ ಕಾರು ನಡುವೆ ಡಿಕ್ಕಿ ಸಂಭವಿಸಿದೆ.

​ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮುಹಮ್ಮದ್ ಅಶ್ರಫ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ತಲುಪಿಸಲಾಯಿತಾದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರ ಪತ್ನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!