ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣಾ ಅಪರಾಧ ಸಂಖ್ಯೆ 252/2014ರ, ಐಪಿಸಿ ಸೆಕ್ಷನ್ 399 ಮತ್ತು 402ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕೇರಳದ ಕಾಸರಗೋಡು ನಿವಾಸಿ ಅಶ್ರಫ್ ಎಂಬಾತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.
ಆತನ ವಿರುದ್ಧ ಜಾರಿಯಾಗಿದ್ದ ವಾರಂಟ್ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಸುಳ್ಯ ಠಾಣೆಯ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೆಬಲ್ 368 ರಾಜು ನಾಯ್ಕ್ ಹಾಗೂ ಪೊಲೀಸ್ ಕಾನ್ಸ್ಟೆಬಲ್ 2308 ಸಂತೋಷ್ ಅವರು ಅಶ್ರಫ್ನನ್ನು ದಸ್ತಗಿರಿ ಮಾಡಿದ್ದಾರೆ.

ನಂತರ ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

