ಕಾಸರಗೋಡು ಶ್ರೀ ವೆಂಕಟರಮಣ ದೇವಸ್ಥಾನದ ನವರಾತ್ರಿ ಮಹೋತ್ಸವಕ್ಕೆ ಭರದ ಸಿದ್ಧತೆ

ಕಾಸರಗೋಡು: ಕಾಸರಗೋಡು ಪೇಟೆಯ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅ.11ರಿಂದ 21ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ದೇವಸ್ಥಾನದ ಕ್ಷೇತ್ರ ಸಮಿತಿಯ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಹೋತ್ಸವಕ್ಕೆ ಅಧಿಕೃತವಾಗಿ ಆಹ್ವಾನಿಸಲಾಯಿತು.

ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಹಸ್ತಾಂತರಿಸಿ, ಮಹೋತ್ಸವದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಮಹೋತ್ಸವವು ಯಶಸ್ವಿಯಾಗಿ ನೆರವೇರಲು ಅವರ ಆಶೀರ್ವಾದವನ್ನು ಪಡೆಯಲಾಯಿತು. ದೇವಸ್ಥಾನದಲ್ಲಿ ನಡೆಯಲಿರುವ ನವರಾತ್ರಿ ಆಚರಣೆಯು ಭಕ್ತಿಭಾವದಿಂದ ಹಾಗೂ ವೈಭವೋಪೇತವಾಗಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಶ್ರೀ ವೆಂಕಟರಮಣ ದೇವಸ್ಥಾನವು ಕಾಸರಗೋಡು ಭಾಗದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯಲ್ಲಿ ಮಹತ್ವದ ಸ್ಥಾನ ಹೊಂದಿದ್ದು, ನವರಾತ್ರಿ ಸಂದರ್ಭದಲ್ಲಿ ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಮಹೋತ್ಸವದ ಅಂಗವಾಗಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ.

ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಪ್ರಮುಖರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ, ವಸಂತ ಕೆರೆಮನೆ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಗೌರವಾಧ್ಯಕ್ಷ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಉಪಸ್ಥಿತರಿದ್ದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!