ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

ಸೂರಂಬೈಲು: ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಸುನೀತ ಎ. ಅವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ಸ್ವಚ್ಛತೆಯ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಿರಿಯ ಶಿಕ್ಷಕಿ ಗೀತ ಕಂಚಿಕಟ್ಟೆ, ಸ್ಟಾಫ್ ಸೆಕ್ರೆಟರಿ ಶರತ್ ಕುಮಾರ್ ಬೇಳ ಹಾಗೂ ಸಮಾಜ ವಿಜ್ಞಾನ ಕ್ಲಬ್‌ನ ರಾಧಾಕೃಷ್ಣ ಬಂಬ್ರಾಣ ಅವರು ಗಾಂಧೀಜಿಯವರ ಜೀವನ ಮತ್ತು ಆದರ್ಶಗಳ ಕುರಿತು ಮಾತನಾಡಿದರು.

ಶಾಲಾ ನಾಯಕ ಗಿರಿಧರ ಎಸ್.ಕೆ. ಅವರ ನೇತೃತ್ವದಲ್ಲಿ ಶಾಲಾ ಪರಿಸರ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಸಿಹಿತಿಂಡಿ ವಿತರಿಸಲಾಯಿತು.

SHARE
Loading spinner

Leave a Reply

Your email address will not be published. Required fields are marked *

error: Content is protected !!