ಕಾಸರಗೋಡು : ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಗಾಂಧಿ ಜಯಂತಿಯ ದಿನದಂದು ಕಾಸರಗೋಡು ನಗರಸಭೆ ವ್ಯಾಪ್ತಿಯ ಕರಂದಕ್ಕಾಡ್ ರೋಟರಿ ಪಾರ್ಕ್ ಅನ್ನು ಬಿಜೆಪಿ – ಯುವ ಮೋರ್ಚಾ ಕಾರ್ಯಕರ್ತರ ನೇತೃತ್ವದಲ್ಲಿ ಸ್ವಚ್ಛಗೊಳಿಸಲಾಯಿತು.


ಬಿಜೆಪಿ ರಾಜ್ಯ ಸೆಲ್ ಕೋರ್ಡಿನೇಟರ್ ವಿ.ಕೆ. ಸಜೀವನ್, ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್., ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸತೀಶ್ ಚಂದ್ರ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪಿ.ಆರ್. ಸುನಿಲ್, ಎನ್. ಬಾಬುರಾಜ್, ಮನುಲಾಲ್ ಮೇಲತ್, ಜಿಲ್ಲಾ ಉಪಾಧ್ಯಕ್ಷ ಪಿ. ರಮೇಶ್, ಜಿಲ್ಲಾ ಕಾರ್ಯದರ್ಶಿ ಪ್ರಮೀಳಾ ಮಜಲ್, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಕೆ.ಎಸ್. ರಮಣಿ, ಅನಿತಾ ನಾಯ್ಕ್, ಪ್ರೇಮಲತಾ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಮೊದಲಾದವರು ನೇತೃತ್ವ ವಹಿಸಿದ್ದರು.

