ದೇಹಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತ್ಯು

​ಕಾಸರಗೋಡು : ಬೇಡಗಂ ತೋರ ಮೂಲದ ದಿ. ನಾರಾಯಣನ್ ಅವರ ಪುತ್ರಿ ಹರಿಶ್ರೀ (40) ಎಂಬ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

​ಕಳೆದ ಜುಲೈ 21ರಂದು ತಮ್ಮ ಮನೆಯ ಶೌಚಾಲಯದಲ್ಲಿ ದೇಹಕ್ಕೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ಇವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಲ್ಲಿಕೋಟೆ ವೈದ್ಯಕೀಯ ಕಾಲೇಜು ಹಾಗೂ ತದನಂತರ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಆದರೆ, ಶೇಕಡಾವಾರು ತೀವ್ರ ಸ್ವರೂಪದ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಯುವತಿ, ಜೀವನ್ಮರಣ ಹೋರಾಟ ನಡೆಸಿ ಅಂತಿಮವಾಗಿ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬೇಡಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!