ಭ್ರಮರ ಬಹದ್ದೂರ್ ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026

ಕಾಸರಗೋಡು: ಬಹದ್ದೂರ್ ಸಾಂಸ್ಕೃತಿಕ ಪ್ರತಿಷ್ಠಾನದ ಉಪಾಧ್ಯಕ್ಷೆ, ನಿವೃತ್ತ ಪ್ರಾಧ್ಯಾಪಕಿ ಹಾಗೂ ಸಂಘಟಕಿ ಶ್ರೀಮತಿ ಭ್ರಮರ ಬಹದ್ದೂರ್ ಅವರನ್ನು ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ಕ್ಕೆ ಆಯ್ಕೆ ಮಾಡಲಾಗಿದೆ.

ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಅವರ ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ ನಡೆಯಲಿದೆ.

ಸಾಂಸ್ಕೃತಿಕೋತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ‘ಕಾಸರಗೋಡು ದಸರಾ ರಾಷ್ಟ್ರೀಯ ಕವಿ ಸಮ್ಮೇಳನ’ ಹಾಗೂ ‘ಕಾಸರಗೋಡು ದಸರಾ ಕವಿಗೋಷ್ಠಿ’ ನಡೆಯಲಿದೆ. ಶ್ರೀನಿವಾಸ್ ಬಹದ್ದೂರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಚುಟುಕು ಸಾಹಿತ್ಯ ಪರಿಷತ್ ಸಂಸ್ಥಾಪಕ ಹಾಗೂ ಚುಟುಕು ಯುಗಾಚಾರ್ಯ ಡಾ. ಎಂ.ಜಿ.ಆರ್. ಅರಸ್ ಉದ್ಘಾಟಿಸಲಿದ್ದಾರೆ. ಮೇರು ಕವಿ, ಸಾಹಿತಿ ಹಾಗೂ ಸಂಘಟಕ ಡಾ. ಜಯಪ್ಪ ಹೊನ್ನಾಳಿ ಮೈಸೂರು ಅವರು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಭ್ರಮರ ಬಹದ್ದೂರ್ ಅವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲಾಗುವುದು ಎಂದು ಕಾಸರಗೋಡು ದಸರಾ ಪ್ರಧಾನ ಸಂಚಾಲಕ ಹಾಗೂ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಮತ್ತು ಪಾಂಗೋಡು ಕ್ಷೇತ್ರ ಸಾಂಸ್ಕೃತಿಕ ಘಟಕದ ಅಧ್ಯಕ್ಷ ಪಾಂಗೋಡು ಪ್ರವೀಣ್ ನಾಯಕ್ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHARE
Loading spinner

One thought on “ಭ್ರಮರ ಬಹದ್ದೂರ್ ಅವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026”

  1. Really enjoying the vibe here. Everything is easy to navigate and the customer support is actually helpful. Highly recommend 56wgame for anyone starting out.

    Loading spinner

Leave a Reply

Your email address will not be published. Required fields are marked *

error: Content is protected !!