ಮಂಗಳೂರು: ನವರಾತ್ರಿ ಹಬ್ಬದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಶಾಲೆಟ್ ಪಿಂಟೋ ಅವರ ನೇತೃತ್ವದಲ್ಲಿ ಹಾಗೂ ಅವರ ಪ್ರಸ್ತುತಿಯಲ್ಲಿ ‘ಡ್ಯಾಂಡಿಯಾ ನೈಟ್ 2.0’ ಕಾರ್ಯಕ್ರಮವನ್ನು ಅಕ್ಟೋಬರ್ 18ರಂದು ಸುಲ್ತಾನ್ ಬತ್ತೇರಿಯ ಎಡ್ಜ್ ವಾಟರ್ನಲ್ಲಿ ಅದ್ಧೂರಿಯಾಗಿ ಆಯೋಜಿಸಲಾಗಿದೆ.

ಅಂದು ಸಂಜೆ 6.30ರಿಂದ ಕಾರ್ಯಕ್ರಮ ಆರಂಭವಾಗಲಿದ್ದು, ನವರಾತ್ರಿ ಸಂಭ್ರಮವನ್ನು ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳೊಂದಿಗೆ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಲೈವ್ ಪಂಜಾಬಿ ಡೋಲ್ ಪ್ರಮುಖ ಆಕರ್ಷಣೆಯಾಗಿದ್ದು, ಡ್ಯಾಂಡಿಯಾ ನೃತ್ಯದೊಂದಿಗೆ ಭಾಗವಹಿಸುವವರಿಗೆ ಉತ್ಸಾಹಭರಿತ ಸಂಭ್ರಮದ ವಾತಾವರಣ ಕಲ್ಪಿಸಲಾಗುವುದು.
ಇದರೊಂದಿಗೆ ವಿವಿಧ ಮನರಂಜನಾ ಕಾರ್ಯಕ್ರಮಗಳು, ಉತ್ಸಾಹಭರಿತ ಆಟಗಳು ಹಾಗೂ ವೈವಿಧ್ಯಮಯ ಆಹಾರ ಮಳಿಗೆಗಳು ಇರಲಿವೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಡ್ಯಾಂಡಿಯಾ ಸ್ಟಿಕ್ಗಳನ್ನು ಉಚಿತವಾಗಿ ವಿತರಿಸಲಾಗುವುದು.

ನವರಾತ್ರಿ ಹಬ್ಬದ ಸಾಂಪ್ರದಾಯಿಕ ಉಡುಗೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅತ್ಯುತ್ತಮ ಉಡುಗೆ, ಅತ್ಯುತ್ತಮ ಪ್ರದರ್ಶನ ಹಾಗೂ ಅತ್ಯುತ್ತಮ ಜೋಡಿ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುವುದು. ಕಾರ್ಯಕ್ರಮದ ಆಹಾರ ಮಳಿಗೆಗಳಲ್ಲಿ ಆಹಾರ ಸೇವನೆಗೆ ಪ್ರತ್ಯೇಕ ಶುಲ್ಕ ಅನ್ವಯವಾಗಲಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು 12 ವರ್ಷದೊಳಗಿನ ಮಕ್ಕಳಿಗೆ ₹200 ಹಾಗೂ ವಯಸ್ಕರಿಗೆ ₹299 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಟಿಕೆಟ್ಗಳನ್ನು ಪಡೆಯಲು ನೀಡಲಾಗಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ನವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಕುಟುಂಬ ಸಮೇತವಾಗಿ, ಸ್ನೇಹಿತರೊಂದಿಗೆ ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಡ್ಯಾಂಡಿಯಾ ನೈಟ್ನ ಸಂಭ್ರಮವನ್ನು ಆಸ್ವಾದಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಕಾರ್ಯಕ್ರಮ ಹಾಗೂ ಟಿಕೆಟ್ಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ 96111 93784 ಅಥವಾ 99808 83070 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಶಾಲೆಟ್ ಪಿಂಟೋ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

