ಕಾರು ಢಿಕ್ಕಿಯಾಗಿ ಗಾಯಗೊಂಡಿದ್ದ ಗೃಹಿಣಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕುಂಬಳೆ : ಕುಂಬಳೆಯಲ್ಲಿ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಗೃಹಿಣಿಯೊಬ್ಬರು ಸಾವನ್ನಪ್ಪಿದ್ದಾರೆ.
ಇಚಿಲಂಪಾಡಿ ಕಳತ್ತೂರು ನಿವಾಸಿ ಚೆನ್ನಪ್ಪ ಪೂಜಾರಿ ಅವರ ಪತ್ನಿ ಲಕ್ಷ್ಮಿ (69) ಸಾವನ್ನಪ್ಪಿದ ದುರ್ದೈವಿ.

​ಕಳೆದ ಆಗಸ್ಟ್ 14 ರಂದು ಕುಂಬಳೆಯಲ್ಲಿ ಇವರಿಗೆ ಕಾರು ಢಿಕ್ಕಿ ಹೊಡೆದಿತ್ತು. ತಕ್ಷಣವೇ ಅವರನ್ನು ಮಂಗಳೂರು ಮತ್ತು ಕುಂಬಳೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಿಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!