ಪ್ರಧಾನಿ ಮೋದಿ ಜನ್ಮದಿನಾಚರಣೆ: ಚಿತ್ರ ರಚನೆ ಹಾಗೂ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮಂಜೇಶ್ವರ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಜೇಶ್ವರ ಮಂಡಲ ವತಿಯಿಂದ ಆಯೋಜಿಸಲಾಗಿದ್ದ ಚಿತ್ರ ರಚನೆ ಹಾಗೂ ಭಾಷಣ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭ ಹೊಸಂಗಡಿಯ ಪ್ರೇರಣಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ್ ಬಿ.ಎಂ. ಸೇರಿದಂತೆ ಪಕ್ಷದ ಮುಖಂಡರಾದ ಸಲೀಲ್ ಮಾಸ್ಟರ್, ಯಾದವ ಬಡಾಜೆ, ಪದ್ಮನಾಭ ಕಡಪರ, ನ್ಯಾಯವಾದಿ ನವೀನ್ ರಾಜ್, ಆಶಾಲತಾ ಮೆಂಬರ್, ಹರೀನಾಕ್ಷಿ, ತುಳಸಿ ವರ್ಕಾಡಿ, ಪ್ರಕಾಶ ಮೆಂಬರ್ ಹಾಗೂ ಮಧು ಉಪಸ್ಥಿತರಿದ್ದರು.

ಸ್ಪರ್ಧೆಗಳಲ್ಲಿ ವಿಜೇತರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನಗಳನ್ನು ವಿತರಿಸಿ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಸ್ಪರ್ಧಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

SHARE
Loading spinner

One thought on “ಪ್ರಧಾನಿ ಮೋದಿ ಜನ್ಮದಿನಾಚರಣೆ: ಚಿತ್ರ ರಚನೆ ಹಾಗೂ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ”

Leave a Reply

Your email address will not be published. Required fields are marked *

error: Content is protected !!