ಬೆಂಗಳೂರು: ಹಿರಿಯ ಸ್ವರ್ಣೋದ್ಯಮಿ ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಮಾಲೀಕರಾದ ಸರಾಫ ಮುಳಿಯ ಶ್ಯಾಮ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಚಿನ್ನಾಭರಣ, ಬೆಳ್ಳಿ ಮತ್ತು ವಜ್ರ ವ್ಯವಹಾರ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಮುಳಿಯ ಶ್ಯಾಮ ಭಟ್ ಅವರು ‘ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್’ ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ, ಸಾಹಿತ್ಯ ಕ್ಷೇತ್ರ ಮಾತ್ರವಲ್ಲದೇ ಧಾರ್ಮಿಕ ಕ್ಷೇತ್ರಗಳಿಗೆ ದಾನ ನೀಡುತ್ತಿದ್ದ ಅವರು ಕೊಡುಗೈ ದಾನಿ ಎಂದೇ ಪ್ರಸಿದ್ಧರಾಗಿದ್ದರು ಎಂದು ತಿಳಿಸಿದ್ದಾರೆ.
ಭಗವಂತನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬದ ಸದಸ್ಯರು, ಬಂಧುಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.


Top notch service and a very user-friendly layout. I had a few questions and the support team sorted me out quickly. Highly recommend bd39999bat.
Such a hidden gem. The variety of games is impressive and the loading time is almost zero. Give neu88com a try!