ಕುಂದಾಪುರ: ದನ ಕಳವು ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಉಡುಪಿ: ಕುಂದಾಪುರ ತಾಲೂಕಿನ ಕಾಳಾವರ ಜಂಕ್ಷನ್‌ನಲ್ಲಿ ಮೂರು ದಿನಗಳ ಹಿಂದೆ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿ ಆರೋಪಿಗಳನ್ನು ಕುಂದಾಪುರ ಪೊಲೀಸರು ಆ.1ರಂದು ಬಂಧಿಸಿದ್ದಾರೆ.


ಗುಲ್ವಾಡಿಯ ಅಬೂಬಕರ್(39), ಮಹಮ್ಮದ್ ರಫೀಕ್(36), ಯಾಕೂಬ್(24), ತಲ್ಲೂರು ಕೋಟೆ ಬಾಗಿಲಿನ ಸುನಿಲ್(33) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 5,00,000ರೂ. ಎಂದು ಅಂದಾಜಿಸಲಾಗಿದೆ. ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!