ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆನೆದೋಡಿ ಎಂಬಲ್ಲಿ ಸೋಮವಾರ ಮುಂಜಾನೆ ಸಿಡಿಲು ಬಡಿದು ಮನೆಯೊಂದು ಸಂಪೂರ್ಣ ಹಾನಿಗೊಳಗಾದ ಘಟನೆ ನಡೆದಿದೆ.

ಆನೆದೋಡಿ ನಿವಾಸಿ ನಾಗೇಶ್ ಕುಲಾಲ್ ಅವರ ಮನೆಗೆ ಮುಂಜಾನೆ ಸಿಡಿಲು ಬಡಿದಿದ್ದು, ಸಿಡಿಲಿನ ತೀವ್ರತೆಗೆ ಮನೆಯ ಕಟ್ಟಡ ಹಾಗೂ ಮನೆಯೊಳಗಿದ್ದ ವಸ್ತುಗಳು ಹಾನಿಗೊಂಡಿವೆ. ಘಟನೆಯ ಸಂದರ್ಭದಲ್ಲಿ ಮನೆಯಲ್ಲಿದ್ದ ನಾಗೇಶ್ ಕುಲಾಲ್ ಅವರ ಪತ್ನಿ ಕುಸಲಾಕ್ಷಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡ ಕುಸಲಾಕ್ಷಿ ಅವರನ್ನು ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಿಕಿತ್ಸೆ ಮುಂದುವರಿಸಲಾಗಿದೆ.

ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಗಾಯಾಳು ಕುಸಲಾಕ್ಷಿ ಅವರ ಆರೋಗ್ಯ ವಿಚಾರಿಸಿ, ಕುಟುಂಬದವರಿಗೆ ಧೈರ್ಯ ತುಂಬಿದರು.
ಸಿಡಿಲು ಬಡಿತದಿಂದ ಸಂಪೂರ್ಣ ಹಾನಿಗೊಂಡಿರುವ ಮನೆಯ ಪರಿಸ್ಥಿತಿಯನ್ನು ಪರಿಶೀಲಿಸಿ, ಕುಟುಂಬಕ್ಕೆ ಅಗತ್ಯ ನೆರವು ದೊರಕಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್,ಬಂಟ್ವಾಳ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಬೇಬಿ ಕುಂದರ್ ಉಪಸ್ಥಿತರಿದ್ದರು.


Logging in is a breeze and I never face any glitches. It is the most stable app I have used so far. Just head over to bjbajiapplogin.