15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಬಂಧನ

ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು, ಉದ್ಯೋಗ ಕೊಡಿಸದೇ ಹಾಗೂ ಹಣವನ್ನೂ ಹಿಂತಿರುಗಿಸದೇ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ. ನಂ. 151/2011, ಕಲಂ 420, 465, 468, 471 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿದ್ದ ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಪ್ರಕರಣದ ವಿಚಾರಣೆಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು 2026ರ ಅಕ್ಟೋಬರ್ 5ರಂದು ವಿಟ್ಲ ಠಾಣಾ ಸಿಬ್ಬಂದಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ ಹಾಗೂ ಯಂಕಪ್ಪ ಅವರು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು.ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

SHARE
Loading spinner

One thought on “15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆಸಾಮಿ ಬಂಧನ”

Leave a Reply

Your email address will not be published. Required fields are marked *

error: Content is protected !!