ಏಷ್ಯನ್ ಗೇಮ್ಸ್‌ನಲ್ಲಿ ಪದಕ ವಿಜೇತೆ ಪೂವಮ್ಮಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಂದ ಗೌರವ

ಬೆಂಗಳೂರು: ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಅಥ್ಲೀಟ್ ಶ್ರೀಮತಿ ಎಂ.ಆರ್. ಪೂವಮ್ಮ ಅವರನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ಎಚ್‌ಎಂಟಿ ಭವನದಲ್ಲಿ ಆತ್ಮೀಯವಾಗಿ ಗೌರವಿಸಿದರು.

ಈ ಸಂದರ್ಭದಲ್ಲಿ ಪೂವಮ್ಮ ಅವರ ಪೋಷಕರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ಪೂವಮ್ಮ ಮತ್ತು ಅವರ ಕುಟುಂಬದ ಸದಸ್ಯರನ್ನು ಕೇಂದ್ರ ಸಚಿವರು ಆತ್ಮೀಯವಾಗಿ ಸತ್ಕರಿಸಿ ಅಭಿನಂದಿಸಿದರು.

ಕ್ರೀಡಾ ಕ್ಷೇತ್ರದಲ್ಲಿ ಪೂವಮ್ಮ ಅವರು ಮಾಡಿರುವ ಸಾಧನೆಯನ್ನು ಶ್ಲಾಘಿಸಿದ ಅವರು, ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.

SHARE
Loading spinner

Leave a Reply

Your email address will not be published. Required fields are marked *

error: Content is protected !!