ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

”ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಿಗುವುದೇ ಸರ್ಕಾರದ ಆಶಯ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಕಾಣುತ್ತಿದೆ. ಜೀವನ ಶಿಕ್ಷಣ ನೀಡುವ ಮೂಲಕ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರಿಗೆ ಸ್ವಾವಲಂಭಿ ಜೀವನದ ಅಡಿಪಾಯ ಹಾಕಿದೆ” ಎಂದು ಎಂ.ಎಲ್.ಸಿ ಎಸ್ ಭೋಜೇಗೌಡ ಹೇಳಿದರು.

ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಂಘ ಮತ್ತು ಎಸ್.ಡಿ.ಎಂ ಪಿಯು ಕಾಲೇಜಿನ ಜಂಟಿ ಆಶ್ರಯದಲ್ಲಿ ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಎನ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮಾತನಾಡಿ, “ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಮಾನದಲ್ಲಿ ಸಾಮಾಜಿಕ ಜಾಲತಾಣಗಳಿಂದ ಮಕ್ಕಳನ್ನು ಹೊರತಂದು ಅವರ ಸರ್ವತೋಮುಖ ಬೆಳವಣಿಗೆಗೆ ಎಲ್ಲ ಶಿಕ್ಷಕರು ಅವಿರತವಾಗಿ ಶ್ರಮಿಸಬೇಕು’ ಎಂದರು.

ರಾಜ್ಯಮಟ್ಟದ ಉತ್ತಮ ಉಪನ್ಯಾಸಕ ಪ್ರಶಸ್ತಿ ಪಡೆದ ಉಪ್ಪಿನಂಗಡಿ ಕಾಲೇಜಿನ ಉಪನ್ಯಾಸಕ ಇಬ್ರಾಹಿಂ, ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಕಾರ್ಯಾಧ್ಯಕ್ಷ ಹರೀಶ್ ಎನ್, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಂಟಿ ಕಾರ್ಯದರ್ಶಿ ವಿಠಲ ಎ., ಅವರನ್ನು ಗೌರವಿಸಲಾಯಿತು. ಶೇ 100 ಫಲಿತಾಂಶ ಪಡೆದ ಜಿಲ್ಲೆಯ 70 ಕಾಲೇಜುಗಳ ಪ್ರಾಂಶುಪಾಲರನ್ನು ಮತ್ತು ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಯಿತು. ಅಲ್ಲದೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು, ನಾಲ್ಯಪದವು ಕಾಲೇಜಿನ ಪ್ರಾಂಶುಪಾಲ ಜಯಾನಂದ ಎನ್.ಸುವರ್ಣ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರೇಮನಾಥ ಶೆಟ್ಟಿ, ಮಂಗಳೂರು ಕೆನರಾ ಕಾಲೇಜಿನ ಉಪನ್ಯಾಸಕ ಸುಬ್ರಹ್ಮಣ್ಯ, ವಿಶ್ವ ಮಂಗಳ ಪದವಿ ಪೂರ್ವ ಕಾಲೇಜು, ಕೊಣಾಜೆ ಕಾಲೇಜಿನ ಪ್ರಾಂಶುಪಾಲೆ ಪೂರ್ಣಿಮಾ ಡಿ. ಶೆಟ್ಟಿ, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ವಿ. ಕಿರಣ್ ಶೆಟ್ಟಿ, ಆಳ್ವಾಸ್ ಕಾಲೇಜಿನ ಕಚೇರಿ ಅಧೀಕ್ಷಕಿ ಅನಿತಾ ವಿ.ಜೈನ್ ಅವರನ್ನು ಸನ್ಮಾನಿಸಲಾಯಿತು. ಸಮಾರೋಪ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ವಿಜೇತರಿಗೆ ಶ್ರೀಮತಿ ಸೋನಿಯಾ ಯಶೋವರ್ಮ ಬಹುಮಾನ ವಿತರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ. ಯವರು ಅಧ್ಯಕ್ಷತೆ ವಹಿಸಿದ್ದರು.

ದ.ಕ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ರಾಜೇಶ್ವರಿ ಎಚ್.ಎಚ್, ಡಾ. ಹರೀಶ್ ಎನ್., ಆನಂದ ಪಿ., ನಿತಿನ್ ಬಿ.ಟಿ., ಸೋಮಶೇಖರ ನಾಯಕ್, ಹರಿಪ್ರಕಾಶ್ ಬಿ., ದುಗ್ಗಪ್ಪ ಎನ್., ಪೂರನ್ ವರ್ಮ, ಪ್ರೊ. ವಿಶ್ವನಾಥ್ ಪಿ., ಶ್ರೀ ಸುಮಂತ್ ಕುಮಾರ್ ಜೈನ್, ಡಾ. ಸರೋಜಿನಿ ಆಚಾರ್, ಶ್ರೀಮತಿ ಸೀಮಾ ಎ.ಕೆ, ಶ್ರೀ ಜೋಸ್ಪೇನ್ ಲೋಬೋ, ಶ್ರೀ ರಕ್ಷಿತ್ ಕುಲಾಲ್, ಶ್ರೀ ಜಾರ್ಜ್ ಟಿ.ಎಸ್, ಶ್ರೀಮತಿ ಸಂಧ್ಯಾ ಪಿ., ಶ್ರೀ ಎ.ಎಸ್. ಆದರ್ಶ, ಡಾ. ಎಸ್.ಎನ್. ವೆಂಕಟೇಶ್ ನಾಯಕ್, ಶ್ರೀಮತಿ ಜಯಂತಿ ಕೆ., ಶ್ರೀ ಎಚ್.ಕೆ ಪ್ರಕಾಶ್, ಶ್ರೀಮತಿ ಹೇಮಲತ ಬಿ.ಡಿ, ಶ್ರೀ ಡೆಸ್ಮಾಂಡ್ ಎಡ್ವರ್ಡ್ ಡೆಮೆಲ್ಲೊ, ಶ್ರೀಮತಿ ಶೋಭಾ, ಶ್ರೀಮತಿ ಪ್ರಭಾ ಹೆಗ್ಡೆ ಕೆ, ಡಾ. ಪುಟ್ಟಸ್ವಾಮಿ, ಶ್ರೀ ಗಂಗಾಧರ್ ಆಳ್ವ, ಶ್ರೀ ಶೇಖರ್ ರೈ, ಶ್ರೀ ಯೂಸುಫ್ ವಿಟ್ಲ ಉಪಸ್ಥಿತರಿದ್ದರು.

ಎಸ್.ಡಿ.ಎಂ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ. ಸ್ವಾಗತಿಸಿ, ಕಾವೂರು ಕಾಲೇಜಿನ ಪ್ರಾಂಶುಪಾಲೆ ಮಮತಾ ಎ. ವಂದಿಸಿದರು, ಎಸ್.ಡಿ.ಎಂ ಪ್ರಾಧ್ಯಾಪಕ ಡಾ. ಮಹಾವೀರ ಜೈನ್, ಬಲ್ಮಠ ಕಾಲೇಜಿನ ಉಪನ್ಯಾಸಕ ಉಮೇಶ್, ಎಸ್‌.ಡಿ.ಎಂ. ಕಾಲೇಜಿನ ಉಪನ್ಯಾಸಕರು ಶ್ರೀಮತಿ ನಿಹಾರಿಕಾ ಜಿ.ಎನ್ ಮತ್ತು ಶ್ರೀಮತಿ ಸೀಮಾ ಪಿ. ನಿರೂಪಿಸಿದರು.

SHARE
Loading spinner

One thought on “ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ, ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ”

Leave a Reply

Your email address will not be published. Required fields are marked *

error: Content is protected !!