ಶ್ರೀ ಸತ್ಯನಾರಾಯಣ ಭಜನಾ ಮಂದಿರದ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಜೇಶ್ವರ: ಉದ್ಯಾವರ ಗುತ್ತು, ಅಂಬೇಡ್ಕರ್ ನಗರ ಮಂಜೇಶ್ವರದ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 4ರಂದು ಭಜನಾ ಮಂದಿರದಲ್ಲಿ ನಡೆಯಿತು.

ಧಾರ್ಮಿಕ ಮುಂದಾಳು ಹಾಗೂ ಉದ್ಯಾವರ ಬಿಲ್ಡಿಂಗ್ ಕಾಂಟ್ರಾಕ್ಟರ್ ಸಂಸ್ಥೆಯ ಮಾಲೀಕರಾದ ಶ್ರೀ ರಾಮ ಮಂಜೇಶ್ವರ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.ಭಜನಾ ಮಂದಿರದ ಅಧ್ಯಕ್ಷರಾದ ಜಯಪ್ರಕಾಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಭಜನಾ ಮಂದಿರದ ಪ್ರಧಾನ ಅರ್ಚಕರಾದ ಐತಪ್ಪ ಜಿ. ಉದ್ಘಾಟಿಸಿದರು.

ಉಪಾಧ್ಯಕ್ಷರಾದ ದಯಾನಂದ, ಲಕ್ಷ್ಮಣ, ರವಿ ಕುಮಾರ್.ಕೋಶಾಧಿಕಾರಿ ರಾಮ ಗುತ್ತು ಹಾಗೂ ಮಹಿಳಾ ಸಮಿತಿಯ ಗೌರವಾಧ್ಯಕ್ಷರಾದ ಸಾವಿತ್ರಿ ಚೌಕಿ, ಅಧ್ಯಕೆ ಸವಿತ ಮೋಹನ್ ಉಪಸ್ಥಿತರಿದ್ದರು. ಮತ್ತು ಆಡಳಿತ ಸಮಿತಿ ಹಾಗೂ ಮಹಿಳಾ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದರು. ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಯಾದವ ಬಡಾಜೆ ಹಾಗೂ ಯೋಗೀಶ್ ಅಂಬಿತಡಿ ಶುಭಂಸನೆ ಮಾಡಿದರು.

ಭಜನಾ ಸಂಚಾಲಕರದ ವಿಜಯಕುಮಾರ್ ಸ್ವಾಗತಿಸಿ, ಅಕ್ಷಯ್ ಕುಮಾರ್ ವಂದಿಸಿದರು.ಮೋಹನ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

ಮುಂದಿನ ದಿನಗಳಲ್ಲಿ ನಡೆಯಲಿರುವ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

SHARE
Loading spinner

2 thoughts on “ಶ್ರೀ ಸತ್ಯನಾರಾಯಣ ಭಜನಾ ಮಂದಿರದ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ”

Leave a Reply

Your email address will not be published. Required fields are marked *

error: Content is protected !!