ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಆರೋಪ: ಡಿಐಜಿ ಸೋಮಶೇಖರ್ ಅರೆಸ್ಟ್

ಬೆಂಗಳೂರು: ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯನ್ನು ಜೈಲಿನಿಂದ ಬಿಡುಗಡೆ ಮಾಡಿದ ಆರೋಪದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಡಿಐಜಿ ಸೋಮಶೇಖರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

2018ರಲ್ಲಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಂಕರ್ ಎಂಬ ಕೈದಿಯನ್ನು ನಕಲಿ ಸುಪ್ರೀಂ ಕೋರ್ಟ್ ಆದೇಶದ ಆಧಾರದ ಮೇಲೆ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಈ ವೇಳೆ ಸೋಮಶೇಖರ್ ಅವರು ಪರಪ್ಪನ ಅಗ್ರಹಾರ ಜೈಲಿನ ಚೀಫ್ ಸೂಪರಿಂಟೆಂಡೆಂಟ್ ಆಗಿದ್ದರು.

2018ರ ನವೆಂಬರ್ 13ರಂದು ನಕಲಿ ಆದೇಶದ ಆಧಾರದ ಮೇಲೆ ಶಂಕರ್‌ನನ್ನು ಬಿಡುಗಡೆ ಮಾಡಲಾಗಿತ್ತು. ಪ್ರಕರಣದ ತನಿಖೆ ಮುಂದುವರಿದಿದ್ದು, ಈಗಾಗಲೇ ಶಂಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ನಕಲಿ ಆದೇಶ ಸೃಷ್ಟಿಸಿ ಕೈದಿ ಬಿಡುಗಡೆಗೆ ಸಹಕರಿಸಿದ ಆರೋಪದಡಿ ಅಂದಿನ ಜೈಲು ಅಧಿಕಾರಿಯಾಗಿದ್ದ, ಸದ್ಯ ಡಿಐಜಿ ಆಗಿರುವ ಸೋಮಶೇಖರ್ ಅವರನ್ನು ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!