ಅರ್ಹ ಮತದಾರರ ಹೆಸರು ಅಳಿಸುವ ಯತ್ನ ಆರೋಪ: SDPIಯಿಂದ ಎಡಿಸಿಗೆ ಮನವಿ

ಮಂಗಳೂರು:ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿ, SDPI ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಡಿಸಿ ರಾಜು ಕೆ. ಅವರಿಗೆ ಮನವಿ ಸಲ್ಲಿಸಲಾಯಿತು.

Form-7 ಅರ್ಜಿಯ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿರುವ SDPI ಮುಖಂಡರು, ಈ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ Form-7 ಪ್ರಕ್ರಿಯೆಯಿಂದ ತೊಂದರೆಗೊಳಗಾಗಿದ್ದಾರೆ ಎನ್ನಲಾದ ಕೆಲ ಸಂತ್ರಸ್ತರೂ ಉಪಸ್ಥಿತರಿದ್ದರು.SDPI ಮುಖಂಡರ ಮನವಿಯನ್ನು ಆಲಿಸಿದ ಎಡಿಸಿ ರಾಜು ಕೆ., ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!