ಮಂಜೇಶ್ವರದಲ್ಲಿ ಯುವತಿಗೆ ಲೈಂಗಿಕ ದೌರ್ಜನ್ಯ ಆರೋಪ: ಆರೋಪಿ ನಾಪತ್ತೆ, DNA ಪರೀಕ್ಷೆಗೆ ಸಿದ್ಧತೆ

ಮಂಜೇಶ್ವರ : ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ 21 ವರ್ಷದ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಘಟನೆ ಬೆಳಕಿಗೆ ಬಂದಿದೆ. ಬೆದರಿಕೆಗೆ ಹೆದರಿ ಈ ವಿಷಯವನ್ನು ಮುಚ್ಚಿಟ್ಟಿದ್ದ ಯುವತಿ ಗರ್ಭಿಣಿಯಾಗಿ ಆಸ್ಪತ್ರೆಗೆ ದಾಖಲಾದಾಗ, ವೈದ್ಯರ ಮಾಹಿತಿಯನ್ನಾಧರಿಸಿ ಪೊಲೀಸರು 40 ವರ್ಷದ ಚಂದ್ರು ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

​ಆದರೆ, ಹುಟ್ಟಿದ ಮಗು ತನ್ನದಲ್ಲ ಎಂದು ಆರೋಪಿ ವಾದಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಿ, ಸತ್ಯಾಸತ್ಯತೆ ತಿಳಿಯಲು ಡಿಎನ್‌ಎ ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಪ್ರಸ್ತುತ ತಲೆಮರೆಸಿಕೊಂಡಿರುವ ಆರೋಪಿಗಾಗಿ ತನಿಖೆ ತೀವ್ರಗೊಂಡಿದೆ.

SHARE
Loading spinner

Leave a Reply

Your email address will not be published. Required fields are marked *

error: Content is protected !!